Connect with us


      




ದೇಶ

ಯೋಧರ ಮೃತದೇಹ ಹೊತ್ತೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ಅಪಘಾತ: ಪೊಲೀಸರಿಗೆ ಗಾಯ

Bindushree Hosuru

Published

on

ಕೊಯಮತ್ತೂರು: ಡಿ. 09 (ಯುಎನ್ಐ) ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ಹೊತ್ತೊಯ್ಯುತ್ತಿದ್ದ ಎರಡು ಆ್ಯಂಬುಲೆನ್ಸ್‌ಗಳು ತಮಿಳುನಾಡಿನ ಮೆಟ್ಟುಪಾಳ್ಯಂ ಬಳಿ ಗುರುವಾರ ಅಪಘಾತಕ್ಕೀಡಾಗಿವೆ.

ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿಯ ಮೃತದೇಹಗಳನ್ನು ನೀಲಗಿರಿಯ ಎಂಆರ್‌ಸಿ ಬ್ಯಾರಕ್ಸ್ ಚೌಕದಿಂದ ಸೂಲೂರು ವಾಯುನೆಲೆಗೆ ಬೆಂಗಾವಲು ಪಡೆಯಲ್ಲಿ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಆ್ಯಂಬುಲೆನ್ಸ್ ಮುಂದೆ ಚಲಿಸುತ್ತಿದ್ದಆ್ಯಂಬುಲೆನ್ಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಲ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣವೇ ಯೋಧರ ಪಾರ್ಥಿವ ಶರೀರ ಬೇರೊಂದು ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿ ಏರ್​ಬೇಸ್​ಗೆ ತರಲಾಗಿದೆ.

Share