Connect with us


      
ವಿದೇಶ

ಇಮ್ರಾನ್ ಖಾನ್ ಮೇಲೆ ವಿರೋಧ ಪಕ್ಷಗಳ “ಪೆಟ್ರೋಲ್ ಬಾಂಬ್”

Iranna Anchatageri

Published

on

ಇಸ್ಲಾಮಾಬಾದ್ : ಜನವರಿ 02 (ಯು.ಎನ್.ಐ.) ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಹೊಸ ವರ್ಷದ ಸಂದರ್ಭದಲ್ಲಿ ಪೆಟ್ರೋಲ್ ಬೆಲೆಯನ್ನು 4 ರೂಪಾಯಿಗಳಷ್ಟು ಹೆಚ್ಚಿಸಿದೆ. ಪಾಕ್ ಪ್ರಧಾನಿ ತೈಲ ಬೆಲೆಯನ್ನು ಹೆಚ್ಚಳ ಮಾಡಿದ್ದನ್ನು ಖಂಡಿಸಿ ಅಲ್ಲಿನ ನಾಗರಿಕರು ತೀವ್ರ ಆಕ್ರೋಶಗೊಂಡಿದ್ದಾರೆ.

ಒಂದು ಹೆಜ್ಜೆ ಮುಂದೆ ಇಟ್ಟಿರುವ ವಿರೋಧ ಪಕ್ಷಗಳು ಇಮ್ರಾನ್ ಖಾನ್, ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೆ, ಹೊಸ ವರ್ಷದ ಸಂದರ್ಭದಲ್ಲಿ ಪಾಕಿಸ್ತಾನದ ಮೇಲೆ ಇಮ್ರಾನ್ ಖಾನ್ ‘ಪೆಟ್ರೋಲ್ ಬಾಂಬ್’ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ-ಜರ್ದಾರಿ ಮತ್ತು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಪಿಎಂಎಲ್-ಎನ್ ಅಧ್ಯಕ್ಷ ಶಹಬಾಜ್ ಷರೀಫ್ ಪ್ರತ್ಯೇಕ ಹೇಳಿಕೆಗಳಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವ ಸರ್ಕಾರದ ನಿರ್ಧಾರವನ್ನು ಟೀಕಿಸಿದರು. ಅಲ್ಲದೆ, ಪಾಕಿಸ್ತಾನ ಸಂಕಷ್ಟದಿಂದ ಪಾರಾಗಲು ಉಳಿದಿರುವ ಒಂದೇ ಮಾರ್ಗ ಎಂದರೆ ಇಮ್ರಾನ್ ಖಾನ್ ರಾಜೀನಾಮೆ ನೀಡುವುದು ಎಂದು ವಿರೋಧ ಪಕ್ಷಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಪಾಕಿಸ್ತಾನದಲ್ಲಿ ಪೆಟ್ರೋಲ್ ದರ 144 ರೂ.ಗೆ ಏರಿಕೆ

ಹೊಸ ವರ್ಷದ ಮುನ್ನಾ ದಿನದಂದು ಇಮ್ರಾನ್ ಸರ್ಕಾರ ಪೆಟ್ರೋಲ್ ಬೆಲೆಯನ್ನು 4 ರೂಪಾಯಿ ಹೆಚ್ಚಳ ಮಾಡಿತು. ಇದರ ನಂತರ, ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 140.82 ರಿಂದ 144.82 ಪಾಕಿಸ್ತಾನಿ ರೂಪಾಯಿಗಳಿಗೆ ಏರಿಕೆ ಕಂಡಿತು. ಇದಲ್ಲದೇ ಸೀಮೆಎಣ್ಣೆ ಬೆಲೆಯಲ್ಲಿಯೂ 3.95 ರೂಪಾಯಿ ಹೆಚ್ಚಳ ಮಾಡಲಾಗಿದೆ.

Share