Connect with us


      
ಕ್ರೀಡೆ

ಕಂಗನಾ, ರಾಣಿ ರಾಮ್‍ಪಾಲ್ ಸೇರಿದಂತೆ ಹಲವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

Bindushree Hosuru

Published

on

ನವದೆಹಲಿ : ನ. 8 (ಯುಎನ್ಐ) ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಮ್‍ಪಾಲ್ ಸೇರಿದಂತೆ ಹಲವಾರು ಮಂದಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು 2020ರ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ರಾಣಿ ರಾಮ್‍ಪಾಲ್ ಅವರ ನೇತೃತ್ವದ ಮಹಿಳಾ ಹಾಕಿ ತಂಡವು 2020ರ ಒಲಂಪಿಕ್ಸ್​ನಲ್ಲಿ ಕಂಚಿನ ಪದಕ ಪಡೆದುಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿತ್ತು.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನಿವೃತ್ತ ಏರ್ ಮಾರ್ಷಲ್ ಡಾ. ಪದ್ಮಾ ಬಂಡೋಪಾದ್ಯಾಯ, ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಚಾನುಲಾಲ್ ಮಿಶ್ರಾ ಕರ್ನಾಟಕದ ಅಕ್ಷರ ಸಂತ ಹರೇಕಳ ಹಾಜಬ್ಬ, ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು, ಬಾಲಿವುಡ್ ನಟಿ ಕಂಗನಾ ರನೌಟ್, ಗಾಯಕ ಅದ್ನಾನ್ ಸಮಿ, ಏಕ್ತಾ ಕಪೂರ್, ಕರಣ್ ಜೋಹರ್ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇನ್ನು ಮಾಜಿ ಹಣಕಾಸು ಸಚಿವೆ ಮತ್ತು ಬಿಜೆಪಿ ಮುಖಂಡ ಅರುಣ್ ಜೇಟ್ಲಿ, ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್, ಗಾಯಕ ಎಸ್‍ಪಿ ಬಾಲಸಬ್ರಹ್ಮಣ್ಯಂ ಮರಣೊತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವರ್ಷ 119 ಪದ್ಮ ಪ್ರಶಸ್ತಿಗಳಲ್ಲಿ ಏಳು ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳನ್ನು ಒಳಗೊಂಡಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಮತ್ತು ಒಬ್ಬ ಮಂಗಳಮುಖಿಗೆ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಈ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ಗಣ್ಯರು ಕೂಡ ಉಪಸ್ಥಿತರಿದ್ದರು.

Share