Connect with us


      




ಆರೋಗ್ಯ

ದೇಶದಲ್ಲಿ ಕೋವಿಡ್ ಪರಿಸ್ಥಿತಿ – ಪ್ರಧಾನಿ ಮೋದಿ ಸಂಜೆ ಪರಾಮರ್ಶೆ

UNI Kannada

Published

on

ನವದೆಹಲಿ, ಜ 9(ಯುಎನ್ ಐ) ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 4.30ಕ್ಕೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರು ಕಳೆದ ತಿಂಗಳು ಸಹ ಕೋವಿಡ್ ಪರಿಸ್ಥಿತಿ ಪರಾಮರ್ಶಿಸಲು ಉನ್ನತ ಮಟ್ಟದ ಸಭೆ ನಡೆಸಿ, ಕೊರೋನಾ ,ಓಮಿಕ್ರಾನ್ ಹೊಸ ರೂಪಾಂತರಿ ಮಣಿಸಲು ಎಚ್ಚರಿಕೆ ಹಾಗೂ ಜಾಗರೂಕತೆ ಅಗತ್ಯವಾಗಿದೆ ಎಂಬುದನ್ನು ಒತ್ತಿ ಹೇಳಿದ್ದರು.
ಎಲ್ಲ ಹಂತಗಳಲ್ಲಿ ಮುನ್ನಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಪ್ರಧಾನ ಮಂತ್ರಿ ಸೂಚಿಸಿದ್ದರು.
ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರಗಳೊಂದಿಗೆ ನಿಕಟ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

Share