Connect with us


      




ದೇಶ

ಗುಜರಾತ್ ಚುನಾವಣೆಯತ್ತ ಮೋದಿ ಚಿತ್ತ; ಅಹಮದಾಬಾದ್‌ನಲ್ಲಿ ರೋಡ್‌ಶೋ

Vanitha Jain

Published

on

ಅಹಮದಾಬಾದ್‌: ಮಾರ್ಚ್ 11 (ಯು.ಎನ್.ಐ.) ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಗುಜರಾತ್ ಚುನಾವಣೆಯತ್ತ ಗಮನ ಹರಿಸಿದ್ದು, ಶುಕ್ರವಾರ ಅಹಮದಾಬಾದ್‌ನಲ್ಲಿ ಮೆಗಾ ರೋಡ್‌ಶೋ ನಡೆಸಿದರು.

ಪ್ರಧಾನಿ ಮೋದಿಯವರ ಗುಜರಾತ್ ಭೇಟಿಯು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರದ ಆರಂಭವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ರೋಡ್‌ಶೋ ಆಯೋಜಿಸಲಾಗಿದ್ದು, ಸುಮಾರು 6 ಕಿ.ಮೀ. ರೋಡ್ ಶೋ ನಡೆಯಲಿದೆ

ಮಾರ್ಚ್ 11 ಮತ್ತು ಮಾರ್ಚ್ 12 ರಂದು ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಪಂಚಾಯತ್ ಸಂಸ್ಥೆಗಳ ಒಂದು ಲಕ್ಷಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ತಮ್ಮ ಎರಡು ದಿನಗಳ ಭೇಟಿಯ ಸಮಯದಲ್ಲಿ, ಪ್ರಧಾನ ಮಂತ್ರಿಗಳು ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ‘ಖೇಲ್ ಮಹಾಕುಂಭ’ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಮತ್ತು ಗಾಂಧಿನಗರ ಜಿಲ್ಲೆಯ ಲಾವಡ್ ನಲ್ಲಿರುವ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಉದ್ದೇಶಿಸಿ ಮಾತನಾಡಲಿದ್ದಾರೆ.

Share