Published
6 months agoon
By
UNI Kannadaಬೆಂಗಳೂರು : ಜನೆವರಿ 11 (ಯು.ಎನ್.ಐ.) ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರಿಗೆ ಕರೆ ಮಾಡಿ ಪ್ರಧಾನಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಸಂಜೆ 4:30ಕ್ಕೆ ಕರೆ ಮಾಡಿದ ಪ್ರಧಾನಿ, ಮುಖ್ಯಮಂತ್ರಿಗಳ ಜೊತೆ ಐದು ನಿಮಿಷಗಳ ಕಾಲ ದೂರವಾಣಿಯಲ್ಲಿ ಚರ್ಚೆ ನಡೆಸಿದರು.
ತಮಗೆ ಸೋಂಕು ದೃಢಪಟ್ಟಿರುವ ಬಗ್ಗೆ ಮೋದಿಯೊಂದಿಗೆ ಮಾಹಿತಿ ಹಂಚಿಕೊಂಡ ಸಿಎಂ, ತಮ್ಮ ಕುಟುಂಬದ ಇನ್ನಿಬ್ಬರಿಗೆ ಕೊರೊನಾ ದೃಢಪಟ್ಟಿದೆ ಎಂದು ತಿಳಿಸಿದರು. ಇದೇ ವೇಳೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಬೊಮ್ಮಾಯಿಗೆ ಪ್ರಧಾನಿ ಸಲಹೆ ನೀಡಿದ್ದಾರೆ.
ರಾಜ್ಯದ ಕೋವಿಡ್ ಪರಿಸ್ಥಿತಿ ಬಗ್ಗೆ ಮೋದಿಗೆ ಮಾಹಿತಿ ನೀಡಿದ ಸಿಎಂ, ಜನೆವರಿ 13ರ ಕೋವಿಡ್ ಪೂರ್ವಭಾವಿ ಸಭೆಗೂ ಮುನ್ನ ಇಂದು ಅಧಿಕಾರಿಗಳ ಜೊತೆ ವರ್ಚುವಲ್ ಮೀಟಿಂಗ್ ನಡೆಸಿದ್ದೇವೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿಗೆ ಮನವರಿಕೆ ಮಾಡಿದ್ದಾರೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್