Connect with us


      
ದೇಶ

ಕೃಷಿ ಉತ್ಪಾದಕ ಸಂಘಗಳೊಂದಿಗೆ ಪ್ರಧಾನಿ ಸಂವಾದ

UNI Kannada

Published

on

ನವದೆಹಲಿ, ಜ ೧(ಯುಎನ್ ಐ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೊಸ ವರ್ಷದ ಕೊಡುಗೆಯಾಗಿ ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಗಳಿಗೆ ೧೦ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಿದ್ದಾರೆ.
ಅಪರಾಹ್ನ ೧೨.೩೦ಕ್ಕೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ೧೦ ಕೋಟಿಗೂ ಅಧಿಕ ರೈತ ಫಲಾನುಭವಿಗಳಿಗೆ ೨೦ ಸಾವಿರ ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ ೬ ಸಾವಿರ ರೂಪಾಯಿ ಆರ್ಥಿಕ ನೆರವನ್ನು ತಲಾ ೨ ಸಾವಿರ ರೂಪಾಯಿಯಂತೆ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಈ ಮೊತ್ತವನ್ನು ವರ್ಗಾವಣೆ ಮಾಡಲಾಗುವುದು.
ಇದುವರೆಗೂ ೧ ಲಕ್ಷ ೬೦ ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ೩೫೧ ಕೃಷಿ ಉತ್ಪಾದಕ ಸಂಘಗಳಿಗೆ ೧೪ ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತವನ್ನು ಷೇರು ಬಂಡವಾಳವಾಗಿ ಬಿಡುಗಡೆ ಮಾಡಲಿದ್ದಾರೆ.
ಇದರಿಂದ ೩ ಲಕ್ಷ ೨೪ ಸಾವಿರಕ್ಕೂ ಹೆಚ್ಚಿನ ರೈತರಿಗೆ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ ನರೇಂದ್ರಮೋದಿ ಅವರು ಕೃಷಿ ಉತ್ಪಾದಕ ಸಂಘಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ರಾಷ್ಟ್ರವನ್ನುದ್ದೇಶಿ ಭಾಷಣ ಮಾಡಲಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

Share