Published
6 months agoon
ಹೊಸದಿಲ್ಲಿ: ಜನವರಿ 02 (ಯು.ಎನ್.ಐ.) ಪ್ರಧಾನಿ ನರೇಂದ್ರ ಮೋದಿ ಜನವರಿ 4 ರಂದು ತ್ರಿಪುರಾಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರವಾಸಕ್ಕೆ ಕುರಿತು ರಾಜ್ಯದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇದಲ್ಲದೆ ಗಡಿ ಭದ್ರತಾ ಪಡೆಯ (ಬಿಎಸ್ಎಫ್) ಹೆಚ್ಚುವರಿ ನಿಯೋಜನೆಯನ್ನೂ ಮಾಡಲಾಗಿದೆ.
ಪ್ರಧಾನಿಯವರು ತಮ್ಮ ಭೇಟಿಯ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಉನ್ನತ ಅಧಿಕಾರಿಗಳು ಸಹ ಅವರೊಂದಿಗೆ ಇರಲಿದ್ದಾರೆ. ಪ್ರಧಾನಿ ಮೋದಿ ಅವರು ರಾಜಧಾನಿ ಅಗರ್ತಲಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಎಸ್ಎಫ್ನ 120 ಬೆಟಾಲಿಯನ್ ಕಮಾಂಡೆಂಟ್ ರತ್ನೇಶ್ ಕುಮಾರ್, “ವಿವಿಐಪಿಗಳು ಭೇಟಿ ನೀಡಿದಾಗ, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಾಗರೂಕತೆಯನ್ನು ವಹಿಸಲಾಗುತ್ತದೆ. ಅಲ್ಲದೆ, ಈ ಪ್ರದೇಶಗಳಲ್ಲಿ ಗಸ್ತು ಕೂಡ ಹೆಚ್ಚಿಸಲಾಗಿದೆ ಎಂದರು.
ಅಗರ್ತಲಾದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಹೊಸ ಟರ್ಮಿನಲ್ ಕಟ್ಟಡ ಉದ್ಘಾಟನೆಯೊಂದಿಗೆ ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಪಟ್ಟಿಗೆ ಸೇರ್ಪಡೆಯಾಗಲಿದೆ.
ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರು ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲು ಜನವರಿ 4 ರಂದು ತ್ರಿಪುರಾಕ್ಕೆ ಭೇಟಿ ನೀಡಲಿದ್ದಾರೆ ಎಂದು ತ್ರಿಪುರಾ ಸಿಎಂ ಕಚೇರಿ ಮಾಹಿತಿ ನೀಡಿದೆ. ಅಲ್ಲದೆ,
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. 3,400 ಕೋಟಿ ವೆಚ್ಚದಲ್ಲಿ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಬಿಲ್ಡಿಂಗ್ (ಎನ್ಐಟಿಬಿ) ನಿರ್ಮಿಸಲಾಗಿದೆ.
ಮಹಾರಾಜ ಬೀರ್ ಬಿಕ್ರಮ್ ವಿಮಾನ ನಿಲ್ದಾಣವು ಈಶಾನ್ಯದಲ್ಲಿ ಎರಡನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ತ್ರಿಪುರ ಮುಖ್ಯಮಂತ್ರಿ, “ಈಶಾನ್ಯದಲ್ಲಿ ಎರಡನೇ ಅತ್ಯಂತ ಜನನಿಬಿಡವಾದ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲು ಪ್ರಧಾನಮಂತ್ರಿಯವರು ತ್ರಿಪುರಾಕ್ಕೆ ಭೇಟಿ ನೀಡಲಿರುವುದನ್ನು ಪ್ರಧಾನಿ ಕಚೇರಿಯಿಂದ ನನಗೆ ಕರೆ ಬಂದಿದೆ. ಇದಲ್ಲದೇ ಅದೇ ದಿನ ವಿವೇಕಾನಂದ ಮೈದಾನದಲ್ಲಿ ಸಮಾವೇಶವನ್ನು ಉದ್ದೇಶಿಸಿ ಪಿಎಂ ಮೋದಿ ಮಾತನಾಡಲಿದ್ದಾರೆ” ಎಂದು ತಿಳಿಸಿದರು.
ಇದಕ್ಕೂ ಮುನ್ನ ಎಎಐ ಅಧ್ಯಕ್ಷ ಅರವಿಂದ್ ಸಿಂಗ್ ಅವರು ಡಿಸೆಂಬರ್ 15ರಂದು ರಾಜ್ಯಕ್ಕೆ ಭೇಟಿ ನೀಡಿ ಟರ್ಮಿನಲ್ ಕಟ್ಟಡದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ್ದರು. 20 ಚೆಕ್-ಇನ್ ಕೌಂಟರ್ಗಳೊಂದಿಗೆ ಒಂದು ದಿನದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ 1,200 ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ