Connect with us


      
ಸಾಹಿತ್ಯ

ಖ್ಯಾತ ಸಾಹಿತಿ ಚಂಪಾ ನಿಧನಕ್ಕೆ ರಾಜಕೀಯ ಮುಖಂಡರ ಸಂತಾಪ

Vanitha Jain

Published

on

ಬೆಂಗಳೂರು: ಜನವರಿ 10 (ಯು.ಎನ್.ಐ.) ಚಂಪಾ ಎಂದೇ ಖ್ಯಾತರಾಗಿದ್ದ ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ ಚಂದ್ರಶೇಖರ್ ಪಾಟೀಲ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಕೃಷಿ ಸಚಿವ ಬಿ.ಸಿ ಪಾಟೀಲ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಕನ್ನಡ ನಾಡು, ನುಡಿಗೆ ಸೇವೆ ಅವಿಸ್ಮರಣೀಯ
‘ಚಂದ್ರಶೇಖರ ಪಾಟೀಲರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ನಾಡಿನ ಭಾಷೆ, ಸಾಹಿತ್ಯ, ಸಾಮಾಜಿಕ ಹಾಗೂ ಸಾಂಸ್ಕøತಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು ಚಂಪಾ. ಅವರು ಕ್ರಾಂತಿಕಾರಿ ಸಾಹಿತಿ ಮಾತ್ರವಲ್ಲದೇ, ವಿಮರ್ಶಕರು, ನಾಟಕಕಾರರು ಹಾಗೂ ಕವಿಗಳಾಗಿದ್ದರು. ರಾಜ್ಯದ ನಾಡು, ನುಡಿಗೆ ಅವರ ಸೇವೆ ಅವಿಸ್ಮರಣೀಯ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಅಭಿಮಾನಿ ಬಳಗ ಭಗವಂತ ನೀಡಲಿ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಕನ್ನಡ ಸಾರಸ್ವತ ಲೋಕ ಬಡವಾಗಿದೆ
ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಚಂದ್ರಶೇಖರ್ ಪಾಟೀಲ್ ಅವರು ಕನ್ನಡ ನಾಡು ನುಡಿಗೆ ನೀಡಿದ ಕೊಡುಗೆ ಅಪಾರ. ಉತ್ತರ ಕರ್ನಾಟಕದ ಪ್ರಮುಖ ಸಾಹಿತ್ಯ ದ ಕೊಂಡಿ ಕಳಚಿ ಕೊಂಡಂತಾಗಿದೆ. ಅಲ್ಲದೆ, ಅವರ ನಿಧನದಿಂದಾಗಿ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತೀವ್ರ ಸಂತಾಪ ಸೂಚಿಸಿದ್ದಾರೆ.

ಹಾವೇರಿ ಜಿಲ್ಲೆಯ ಸಾಹಿತ್ಯದ ಮುತ್ತು
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ನಿಧನ ಸಾಹಿತ್ಯ ಲೋಕಕ್ಕೆ ಹಾಗೂ ನಾಡಿಗೆ ತುಂಬಲಾಗದ ನಷ್ಟವಾದಂತಾಗಿದೆ. ಹಾವೇರಿ ಜಿಲ್ಲೆಯ ಸಾಹಿತ್ಯದ ಮುತ್ತಾಗಿ ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದ್ದ ಚಂಪಾರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಎಂದು ಪ್ರಾರ್ಥಿಸುತ್ತೇನೆ ಎಂದು ಕೃಷಿ ಸಚಿವ ಹಾಗೂ ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಶೋಕ ವ್ಯಕ್ತಪಡಿಸಿದ್ದಾರೆ.

ಚಂಪಾ ನಿಧನಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಂಬನಿ
ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಕುಮಾರಸ್ವಾಮಿ ಎಂದು ಮಾಜಿ ಮುಖ್ಯಮಂತ್ರಿಗಳು ಕಂಬನಿ ಹೆಚ್.ಡಿ.ಕುಮಾರಸ್ವಾಮಿ ಮಿಡಿದಿದ್ದಾರೆ.

Share