Connect with us


      
ಕರ್ನಾಟಕ

ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ನಿಂದ ರಾಜಕೀಯ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

Iranna Anchatageri

Published

on

ಬೆಂಗಳೂರು: ಮಾರ್ಚ್ 05 (ಯು.ಎನ್.ಐ.) ಕೋರ್ಟ್ ಹೊರಗಡೆ ನದಿ ಪಾತ್ರದ ರಾಜ್ಯಗಳು ಕುಳಿತ ಮಾತುಕತೆ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಕೇಂದ್ರ ಜಲಶಕ್ತಿ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯಗಳು ಜಲಜೀವನ್ ಮಿಷನ್ ಮತ್ತು ಸ್ವಚ್ಚ ಭಾರತ್ ಯೋಜನೆ ಜಾರಿಗೆ ಇರುವ ಅಡ್ಡಿ ಆತಂಕಗಳ ಬಗ್ಗೆ ಚೆರ್ಚೆ ನಡೆಸಲಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ, ಮಧ್ಯಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಪಾಂಡಿಚೇರಿ ಕೇಂದ್ರಾಡಳಿತ ರಾಜ್ಯಗಳು ಸಭೆಯಲ್ಲಿ ಭಾಗಿಯಾಗಿದ್ದವು ಎಂದು ಸಚಿವರು ತಿಳಿಸಿದರು.

ಮೇಕೆದಾಟು ಕುರಿತು ಪ್ರತಿಕ್ರಿಯಿಸಿದ ಅವರು, ಮೇಕೆದಾಟು ಯೋಜನೆ ವಿವಾದ ಸಿಡಬ್ಲ್ಯುಸಿ ಹಾಗೂ ಸುಪ್ರೀಂ ಕೋರ್ಟ ನಲ್ಲಿದೆ. ಕೋರ್ಟ್ ಹೊರಗಡೆ ನದಿ ಪಾತ್ರದ ರಾಜ್ಯಗಳು ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಸೌಹಾರ್ದಯತವಾಗಿ ಬಗೆಹರಿಸಲು ಸಿದ್ದವಿದೆ ಎಂದರು.

ಮೇಕೆದಾಟು ಪಾದಯಾತ್ರೆ ಮೂಲಕ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. 70 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸಮಸ್ಯೆ ಬಗೆಹರಿಸದಿರುವ ಕಾರಣ ಈ ಮಟ್ಟಕ್ಕೆ ಬಂದಿದೆ. ಕೇಂದ್ರದ ಬಿಜೆಪಿ ಸರ್ಕಾರ ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈಗಾಗಾಲೆ ಉತ್ತರ ಪ್ರದೇಶ ಕೆನ್ ಬೆಟ್ವಾ ಪ್ರದೇಶದಂತೆ ರಾಜ್ಯದಲ್ಲಿಯೂ ಅಂತರ ರಾಜ್ಯ ಜಲ ವಿವಾದವನ್ನು ಬಗೆಹರಿಸುವ ಪ್ರಯತ್ನ ನಡೆಸಲಾಗುವುದು ಎಂದು ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದರು.

Share