Connect with us


      
ದೇಶ

ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ

Iranna Anchatageri

Published

on

ಚಂಡೀಗಢ: ಜನೆವರಿ 17 (ಯು.ಎನ್.ಐ.) ಪಂಜಾಬ್‌ನಲ್ಲಿ ಫೆಬ್ರವರಿ 20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಗುರು ರವಿದಾಸ್ ಜಯಂತಿ ಆಚರಣೆಗೆ ಅನುಕೂಲ ಮಾಡಿಕೊಡುವಂತೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ನಂತರ ಫೆಬ್ರವರಿ 14ರಂದು ನಿಗದಿಯಾಗಿದ್ದ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ “ಪಂಜಾಬ್‌ನ ಜನಸಂಖ್ಯೆಯ ಶೇಕಡಾ 32ರಷ್ಟು ಪರಿಶಿಷ್ಟ ಜಾತಿಗಳ ಸಮುದಾಯದ ಪ್ರತಿನಿಧಿಗಳು ತಮ್ಮನ್ನು ಭೇಟಿ ಮಾಡಿದ್ದರು. ಗುರು ರವಿದಾಸ್ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 10ರಿಂದ 16ರವರೆಗೆ ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡುತ್ತೇವೆ. ಹೀಗಾಗಿ ತಮಗೆ ವೋಟ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ಮನವಿ ಮಾಡಿದ್ದರು. ಹೀಗಾಗಿ ಚುನಾವಣಾ ಆಯೋಗ ಪೂರ್ವ ನಿಗದಿ ಮಾಡಿದ್ದ ಫೆಬ್ರವರಿ 14ರ ಚುನಾವಣೆಯನ್ನು 6 ದಿನಗಳ ಕಾಲ ಮುಂದೂಡಬೇಕಂದು” ಸಿಎಂ ಚನ್ನಿ ಮನವಿ ಮಾಡಿದ್ದರು.
ಪಂಜಾಬ್ ರಾಜಕೀಯ ಪಕ್ಷಗಳ ಮನವಿಯ ಮೇರೆಗೆ ಇಂದು ಚುನಾವಣಾ ಆಯೋಗ ಸಭೆ ನಡೆಸಿತ್ತು. ಸಭೆ ಬಳಿಕ ಮಾಹಿತಿ ನೀಡಿದ ಚುನಾವಣಾ ಅಧಿಕಾರಿಗಳು, “ಪಂಜಾಬ್ ಸರ್ಕಾರ ಮತ್ತು ಇತರ ಸಂಘಟನೆಗಳು ಚುನಾವಣೆಯನ್ನು ಮುಂದೂಡುವಂತೆ ಕೋರಿದ್ದವು.” ಗುರು ರವಿದಾಸ್ ಜನ್ಮದಿನದ ಅಂಗವಾಗಿ ಹೆಚ್ಚಿನ ಭಕ್ತರು ವಾರಣಾಸಿಗೆ ಭೇಟಿ ನೀಡುತ್ತಾರೆ. ಫೆಬ್ರವರಿ 14ರಂದು ಮತದಾನದ ದಿನವನ್ನು ಇಟ್ಟುಕೊಳ್ಳುವುದರಿಂದ ಹೆಚ್ಚಿನ ಸಂಖ್ಯೆಯ ಮತದಾರರು ಮತದಾನದಿಂದ ವಂಚಿತರಾಗುತ್ತಾರೆ” ಎಂದು ಗಮನಕ್ಕೆ ತಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿತು.
ರಾಜಕೀಯ ಪಕ್ಷಗಳು ಹಾಗೂ ಪಂಜಾಬ್ ಸರ್ಕಾರದ ಮನವಿ ಮೇರೆಗೆ ಚುನಾವಣೆ ದಿನಾಂಕವನ್ನು ಫೆಬ್ರವರಿ 14ರ ಬದಲಾಗಿ ಫೆಬ್ರವರಿ 20ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Share