Connect with us


      




ರಾಜಕೀಯ

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಅಮಿತ್ ಶಾ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್

Lakshmi Vijaya

Published

on

ನವದೆಹಲಿ: ಆಗಸ್ಟ್ 03 (ಯು.ಎನ್.ಐ.) ಇತ್ತೀಚಿಗೆ ಭೀಕರವಾಗಿ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಪ್ರಕರಣದ ತನಿಖೆಯನ್ನು ಎನ್.ಐ.ಎಗೆ ವಹಿಸಿರುವ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.

ಇತ್ತೀಚೆಗೆ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಪ್ರಕರಣದ ತನಿಖೆಯನ್ನು ಎನ್.ಐ.ಎಗೆ ಒಪ್ಪಿಸಿರುವುದಕ್ಕೆ ಅವರು ಧನ್ಯವಾದ ಸಮರ್ಪಿಸಿದರು. ಅಲ್ಲದೆ, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ನಳಿನ್ ಕುಮಾರ್ ಕಟೀಲ್ ವಿನಂತಿಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಎನ್.ಐ.ಎಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಮತ್ತು ಎನ್.ಐ.ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ.

Share