Connect with us


      




ಸಿನೆಮಾ

ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್, ನಿರ್ಮಾಪಕ ವಿಜಯ್ ಕಿರಗಂದೂರು ಭೇಟಿ…ಮುಂದಿನ ಚಿತ್ರಕ್ಕೆ ನಾಯಕಿಯೇ?

Vanitha Jain

Published

on

ಬೆಂಗಳೂರು: ಜೂನ್ 25 (ಯು.ಎನ್.ಐ.) ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರು ಈಗಾಗಲೇ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಈ ಮೂಲಕ ಸಿನಿ ಪ್ರಪಂಚದಲ್ಲಿ ತಮ್ಮ ಛಾಪನ್ನು ಮೂಡಿಸಲು ಸಿದ್ಧರಾಗುತ್ತಿದ್ದಾರೆ. ಇದೀಗ ನಿರ್ಮಾಪಕ ವಿಜಯ್ ಕಿರಗಂದೂರು ಇವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಹೊಂಬಾಳೆ ಫಿಲ್ಮ್ಸ್ ಕಛೇರಿಯಲ್ಲಿ ಮಾನುಷಿ ಚಿಲ್ಲರ್ ಕಾಣಿಸಿಕೊಂಡಿದ್ದಾರೆ. ಈ ನಡೆ ಹೊಂಬಾಳೆ ಫಿಲ್ಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ಮಾಡಲು ಸಿದ್ದರಾಗಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಆದರೆ ಇದಕ್ಕೆ ಇದುವರೆಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

‘ಕೆಜಿಎಫ್’ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಮಾನುಷಿ ಚಿಲ್ಲರ್ ಗೆ ಸ್ವಾಗತ ಕೋರುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಕೂ ಮಾಡಿದ್ದು, ಮುಂದಿನ ಸಿನಿಮಾ ಮಾತುಕತೆಗೆ ಬಂದಿದ್ದರೇ ಎಂಬ ಪ್ರಶ್ನೆಗಳು ಕಾಡತೊಡಗಿವೆ.

‘ಕೆಜಿಎಫ್’ ಸಿನಿಮಾದ ಯಶಸ್ಸಿನಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಸಂಸ್ಥೆ ಈಗಾಗಲೇ ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಜೊತೆ ಟೈಸನ್ ಸಿನಿಮಾ ಮಾಡುವುದಾಗಿ ಘೋಷಿಸಿತ್ತು. ಒಟ್ಟು ಈ ಬ್ಯಾನರ್ ಅಡಿಯಲ್ಲಿ ೧೪ಕ್ಕೂ ಹೆಚ್ಚು ಸಿನಿಮಾಗಳ ಕಾರ್ಯ ನಡೆಯುತ್ತಿದೆ.

ಇನ್ನು ಈಗಾಗಲೇ ರೂಪದರ್ಶಿ, ನಟಿಯಾಗಿ ಕಾಣಿಸಿಕೊಂಡಿದ್ದ ಮಾನುಷಿ ಚಿಲ್ಲರ್ ೨೦೭ರಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡವರು. ಮಾಜಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಅವರು ಈಗಾಗಲೇ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದಲ್ಲಿ ಸಂಪೂರ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

Share