Connect with us


      




ಕರ್ನಾಟಕ

ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ವತಿಯಿಂದ ಪ್ರತಿಭಟನೆ

Iranna Anchatageri

Published

on

ಬೆಂಗಳೂರು: ಫೆಬ್ರವರಿ 23 (ಯು.ಎನ್.ಐ.)  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಈ ಕುರಿತು ವಿಕಾಸ ಸೌಧದಲ್ಲಿ ಸಚಿವಾಲಯದ ನೌಕರ ಸಂಘದ ಅಧ್ಯಕ್ಷ ಗುರುಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಸರ್ಕಾರ ನೌಕರ ವಿರೋಧಿ ಧೋರಣೆ ಅನುಸರಿಸುತ್ತಿದೆ. ಈ ಕಾರಣದಿಂದ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಧ್ಯಾಹ್ನ 1:30ಕ್ಕೆ ಮೌನ‌ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಮುಂದೆ ಸಂಘ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದು, ಸಚಿವಾಲಯದಲ್ಲಿನ ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆಯನ್ನು ಕೈ ಬಿಡುವುದು,  ಸಚಿವಾಲಯದಲ್ಲಿ ಹೊರಗುತ್ತಿಗೆ ಸೇವೆಯನ್ನು ರದ್ದು ಮಾಡುವುದು,  ಸಚಿವಾಲಯದಲ್ಲಿನ ಖಾಲಿ ಇರುವ ಹುದ್ದೆಗಳು ಹಾಗೂ ಗ್ರೂಪ್ ಡಿ ಮತ್ತು ವಾಹನ ಚಾಲಕರ ಹುದ್ದೆಗಳನ್ನ ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದು ಸಂಘದ ಪ್ರಮುಖ ಬೇಡಿಕೆಗಳಾಗಿವೆ.

Share