Connect with us


      




ಕರ್ನಾಟಕ

ದೌರ್ಜನ್ಯ ಖಂಡಿಸಿ ಅಧಿಕಾರಿಗಳ ಪ್ರತಿಭಟನೆ

Kumara Raitha

Published

on

ಬೆಂಗಳೂರು: ಫೆಬ್ರವರಿ ೦೧ (ಯು.ಎನ್.‌ಐ.)  ವಿವಿಧ ಜಿಲ್ಲೆೆಗಳಲ್ಲಿ ತಹಸೀಲ್ದಾಾರ್‌ಗಳು ಹಾಗೂ ಸರ್ಕಾರಿ ನೌಕರರ ಮೇಲೆ ಹಲ್ಲೆೆ ಹಾಗೂ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸುತ್ತಿಿರುವುದರ ವಿರುದ್ಧ ಕೆಎಎಸ್ ಅಧಿಕಾರಿಗಳು ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಿದರು.
ಕೆೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷ ಎಲಿಷ್ ಆಂಡ್ರೂಸ್ ನೇತೃತ್ವದಲ್ಲಿ ಇಂದು ಮೌನ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಧಿಕಾರಿಗಳಿಗೆ ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ರಕ್ಷಣೆ ನೀಡಬೇಕು ಎಂದು ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.
ಬೀದರ ಜಿಲ್ಲೆೆಯ ಹುಮ್ನಾಬಾದ್ ತಹಸೀಲ್ದಾಾರ್ ಮೇಲೆ ಸಂಘಟನೆಗಳ ಪ್ರತಿನಿಧಿಗಳಿಂದ ಹಲ್ಲೆೆ ಹಾಗೂ ಜಾತಿ ನಿಂದನೆ ಪ್ರಕರಣ, ಮಂಡ್ಯದ ಪಾಂಡವಪುರ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ನೇರವಾಗಿ ಪ್ರವೇಶಿಸಿ ಸಾಮಾಜಿಕ ಜಾಲ ತಾಣಗಳ ಮೂಲಕ ಲೈವ್ ನೀಡಿ ಅಧಿಕಾರಿಗಳಿಗೆ ಮುಜುಗರ ಉಂಟು ಮಾಡುವ ಪ್ರಕರಣಗಳು ನಡೆದಿವೆ.

ಈ ರೀತಿ ಸರ್ಕಾರಿ ಅಧಿಕಾರಿಗಳು ಮುಕ್ತವಾಗಿ ಕೆಲಸ ನಿರ್ವಹಿಸಲು ಅಡ್ಡಿ ಪಡಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಮಹಾರಾಷ್ಟ್ರದಲ್ಲಿ ನಿಯಮಗಳನ್ನು ರೂಪಿಸಲಾಗಿದೆ. ಸಾರ್ವಜನಿಕರೊಂದಿಗೆ ಅಧಿಕಾರಿಗಳು ಹೇಗೆ ನಡೆದುಕೊಳ್ಳಬೇಕೆಂದು ನಿಯಮಗಳನ್ನು ರೂಪಿಸಿದಂತೆ ಸಾರ್ವಜನಿಕರೂ ಅಧಿಕಾರಿಗಳೊಂದಿಗೆ ಹೇಗೆ ನಡೆದುಕೊಳ್ಳಬೇಕೆಂಬ ನಿಯಮ ರೂಪಿಸಬೇಕು ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಅಧಿಕಾರಿಗಳ ವಿರುದ್ಧ ಅನಗತ್ಯವಾಗಿ ಜಾತಿ ನಿಂದನೆ ಪ್ರಕರಣ ದಾಖಲಿಸುವ ಮೊದಲು ಸಕ್ಷಮ ಪ್ರಾಾಧಿಕಾರದ ಮೂಲಕ ಸಂಬಂಧ ಪಟ್ಟ ಪ್ರಕರಣದ ಕುರಿತು ಪರಿಶೀಲನೆ ನಡೆಸಿ ಎಫ್‌ಐಆರ್ ದಾಖಲಿಸಲು ಕ್ರಮ ಕೈಗೊಳ್ಳಬೇಕು. ಕಾರಣವಿಲ್ಲದೇ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ತೊಂದರೆ ಕೊಡುವ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾಾರೆ.

Share