Published
7 months agoon
By
UNI Kannadaಚಿಕ್ಕಬಳ್ಳಾಪುರ : ಜನವರಿ 11 (ಯು.ಎನ್.ಐ.) ಬಿಜೆಪಿ ರಾಜ್ಯ ರೈತ ಮೋರ್ಚಾದ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಹಾಗೂ ರೈತಪರ ಯೋಜನೆಗಳನ್ನು ಜನರಿಗೆ ತಲುಪಿಸಿ ಪ್ರಚುರ ಪಡಿಸುವಂತೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಕರೆ ನೀಡಲಾಯಿತು.
ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ರೈತ ಮೋರ್ಚಾ ಕಾರ್ಯಕಾರಿಣಿಗೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಅನೇಕ ರೈತ ಪರ ಕಾರ್ಯಕ್ರಮಗಳನ್ನು ಮನೆಮನೆಗೆ ಮುಟ್ಟಿಸಬೇಕು. ಕೃಷಿ ಉಪಯೋಗಿ ಅನೇಕ ಕಾರ್ಯಕ್ರಮಗಳನ್ನು ಪ್ರಧಾನಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ಅವುಗಳು ಸಮರ್ಪಕವಾಗಿ ತಲುಪುವಂತೆ ಮಾಡಬೇಕು. ಜನತೆಗೆ ರೈತರಿಗೆ ಸರ್ಕಾರ ರೈತ ಪರವಾಗಿದೆ ಎಂಬ ವಿಶ್ವಾಸ ಮೂಡಿಸಬೇಕು.ರಾಜ್ಯದಲ್ಲಿಯೂ ಕೂಡ ರೈತಾಪಿ ಕಾರ್ಯಕ್ರಮಗಳಿವೆ. ಅವುಗಳನ್ನು ಸಹ ಪ್ರಚುರಪಡಿಸಬೇಕು. ಕೃಷಿ ಕಾಯಿದೆಗಳನ್ನು ಕೇಂದ್ರ ಹಿಂಪಡೆದಿರುವುದರಿಂದ ವಿಪಕ್ಷ ಕಾಂಗ್ರೆಸ್ ಬಲ ಹೆಚ್ಚಾಗಿದೆ. ಜನರಿಗೆ ಹಾಗೂ ರೈತರಿಗೆ ಯಾವ ಉದ್ದೇಶದಿಂದ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಮತ್ತು ಅದರ ಉದ್ದೇಶವನ್ನು ಯಾವ ಕಾರಣಕ್ಕಾಗಿ ಸರಿಯಾಗಿ ಸಮರ್ಥಿಸಿಕೊಳ್ಳಲಾಗಲಿಲ್ಲ. ಏಕೆ ಹಿಂಪಡೆಯಲಾಯಿತೆಂಬ ಬಗ್ಗೆಯೂ ಜನರಿಗೆ ಸರಿಯಾಗಿ ಅರಿವು ಮೂಡಿಸಿ ಬಿಜೆಪಿ ಸರ್ಕಾರ ರೈತಪರ ಎಂಬುದನ್ನು ಮನದಟ್ಟು ಮಾಡುವಂತೆ ಪ್ರಚುರಪಡಿಸಬೇಕೆಂದರು.
ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿರುವ ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್, ರೈತ ಮೋರ್ಚಾ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ರಾಜಶೇಖರ ಆಹ್ವಾನಿತ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ 75 ಎಲೆಕ್ಟ್ರಿಕ್ ಬಸ್ಗಳ ಲೋಕಾರ್ಪಣೆ
ವಿಚ್ಛೇದನಕ್ಕೆ ಅರ್ಜಿ; ಕೌನ್ಸಿಲಿಂಗ್ ನಲ್ಲಿ ಒಂದಾಗ್ತೀವೆಂದ ಗಂಡನಿಂದ ಪತ್ನಿಯ ಕತ್ತು ಸೀಳಿ ಹತ್ಯೆ
ಟಿಪ್ಪು ಭಿತ್ತಿಚಿತ್ರಕ್ಕೆ ಕಿಡಿಗೇಡಿಗಳಿಂದ ಹಾನಿ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ