Published
6 months agoon
By
Vanitha Jainಜೈಪುರ: ಜನೆವರಿ 06 (ಯು.ಎನ್.ಐ.) ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ಕಮಡು ಬಂದಿದ್ದು, ಈ ವಿಚಾರವನ್ನು ಖುದ್ದಾಗಿ ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ.
ಕೋರೋನಾ ದೃಢಪಟ್ಟಿರುವ ಬಗ್ಗೆ ಟ್ವೀಟ್ ಮಾಡಿರುವ ಗೆಹ್ಲೋಟ್, ನಾನು ಈ ಸಂಜೆ ಕೊರೋನಾ ಪರೀಕ್ಷೆಗೆ ಒಳಗಾದೆ. ನನಗೆ ಕೋವಿಡ್ ಕಾಣಿಸಿಕೊಂಡಿದೆ. ಆದರೆ ಸೌಮ್ಯ ಲಕ್ಷಣಗಳಿವೆ, ಬೇರೆ ಯಾವುದೇ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಂದು ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಐಸೋಲೇಟ್ ಆಗಿ ಎಂದು ಸಿಎಂ ಮನವಿ ಮಾಡಿದ್ದಾರೆ.
ಬುಧವಾರ ರಾಜಸ್ಥಾನದ ಮುಖ್ಯಮಂತ್ರಿ ಟ್ವೀಟ್ ಮಾಡಿ, ಕೊರೋನಾದ ಒಮೈಕ್ರಾನ್ ರೂಪಾಂತರವು ಅಪಾಯಕಾರಿ ಅಲ್ಲ ಎಂದು ಸಾರ್ವಜನಿಕರು ಊಹಿಸಿದ್ದಾರೆ, ಅದಕ್ಕಾಗಿಯೇ ಜನರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಆದರೆ ಕೋವಿಡ್ ರೀತಿಯಲ್ಲಿ ಒಮೈಕ್ರಾನ್ ಕೂಡ ಉಲ್ಬಣಗೊಳ್ಳಬಹುದು ಎಂದು ತಜ್ಞರು ಹೇಳಿದ್ದಾರೆ ಎಂದಿದ್ದರು.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ