Temporibus autem quibusdam et aut officiis debitis aut rerum necessitatibus saepe eveniet ut et voluptates repudiandae.
Published
5 years agoon
By
prathamಡಾ. ರಾಜ್ಕುಮಾರ್ ಪ್ರಸಿದ್ದ ಚಲನಚಿತ್ರ ನಟರು. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ.ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. ರಾಜ್ ಕುಮಾರ್ ಅವರ ಬಂಗಾರದ ಮನುಷ್ಯ ಚಿತ್ರದ ನಟನೆಯೂ ಒಂದಾಗಿದೆ
ಕನ್ನಡ ರಂಗಭೂಮಿಯ ಹೆಸರಾಂತ ಪ್ರತಿಭೆ ಸಿಂಗನಲ್ಲೂರು ಪುಟ್ಟಸ್ವಾಮಯ್ಯ ಮತ್ತು ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾಗಿ, ಚಾಮರಾಜನಗರ ಜಿಲ್ಲೆಯ ಗಡಿಭಾಗದಲ್ಲಿರುವ ದೊಡ್ಡ ಗಾಜನೂರಿನಲ್ಲಿ ೧೯೨೯ರ ಏಪ್ರಿಲ್ ೨೪ರಂದು ರಾಜ್ಕುಮಾರ್ ಹುಟ್ಟಿದರು. ನಾಮಕರಣಗೊಂಡ ಹೆಸರು ಮುತ್ತುರಾಜು(ಮುತ್ತಣ್ಣ).
ಡಾ. ರಾಜ್ ಅವರಿಗೆ ವರದರಾಜ್ ಎಂಬ ಸಹೋದರರೂ, ಶಾರದಮ್ಮ ಎಂಬ ತಂಗಿಯೂ ಇದ್ದರು. ೧೯೫೩ ಜೂನ್ ೨೫ರಂದು ಪಾರ್ವತಿಯವರೊಡನೆ ಲಗ್ನವಾಯಿತು. ಪಾರ್ವತಿಯವರು ಮುಂದೆ ಪಾರ್ವತಮ್ಮ ರಾಜ್ಕುಮಾರ್ ಎಂದೇ ಕನ್ನಡದ ಜನತೆಗೆ ಚಿರ ಪರಿಚಿತರಾಗಿ ಕನ್ನಡ ಚಿತ್ರರಂಗದ ಪ್ರಮುಖ ಚಿತ್ರ ನಿರ್ಮಾಪಕರಲ್ಲೊಬ್ಬರಾದರು. ವಜ್ರೇಶ್ವರಿ ಸಂಸ್ಥೆಯ ಅಡಿಯಲ್ಲಿ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಡಾ. ರಾಜ್ ದಂಪತಿಗಳಿಗೆ ೫ ಜನ ಮಕ್ಕಳು. ಮೂರು ಜನ ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು. ಗಂಡು ಮಕ್ಕಳಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಕನ್ನಡ ಚಿತ್ರರಂಗದ ನಾಯಕ ನಟರು. ಹೆಣ್ಣು ಮಕ್ಕಳು ಪೂರ್ಣಿಮಾ ಹಾಗು ಲಕ್ಷ್ಮಿ. ಹಿರಿಯ ಅಳಿಯ ಪಾರ್ವತಮ್ಮನವರ ತಮ್ಮನಾದ ಗೋವಿಂದರಾಜು ಹಾಗು ಕಿರಿಯ ಅಳಿಯ ಚಿತ್ರನಟ ರಾಮ್ಕುಮಾರ್. ಒಟ್ಟು ಹನ್ನೆರಡು ಮೊಮ್ಮಕ್ಕಳಿದ್ದು, ಶಿವರಾಜ್ಕುಮಾರ್ ಪುತ್ರಿಯಾದ ನಿವೇದಿತಾ, ಅಂಡಮಾನ್ ಮುಂತಾದ ಕೆಲವು ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾಳೆ.