Connect with us


      
ದೇಶ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾಗೆ ಕೋವಿಡ್

Vanitha Jain

Published

on

ನವದೆಹಲಿ: ಜನವರಿ 04(ಯು.ಎನ್.ಐ) ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ.

ಕಳೆದ ರಾತ್ರಿ ಜ್ವರ ಮತ್ತು ಶೀತದಂತಹ ರೋಗಲಕ್ಷಣಗಳನ್ನು ಕಾಣಿಸಿಕೊಂಡ ಕಾರಣ ನಾನು ನನ್ನನ್ನು ಪರೀಕ್ಷಿಸಿಕೊಂಡೆ. ಆಗ ಕೋವಿಡ್ ಇರುವುದು ಗೊತ್ತಾಗಿದೆ. ಕಳೆದ 24 ಗಂಟೆಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರಿಗೂ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಕಳೆದ ವರ್ಷವೂ ಕೋವಿಡ್‍ಗೆ ಒಳಗಾಗಿದ್ದರು ಮತ್ತು ಗುರುಗ್ರಾಮ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಸುರ್ಜೇವಾಲಾ ಸೋಮವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕೃಷಿ ಕಾನೂನು ಮತ್ತು ರೈತ ಕಾನೂನು ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ರೈತರ ಸಾವಿನ ವಿಷಯದ ಬಗ್ಗೆ ಪ್ರಧಾನ ಮಂತ್ರಿಯು ದುರಹಂಕಾರಿ ಎಂದು ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿಕೆ ಬಗ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಜನವರಿ 1 ರಂದು ಗಾಲ್ವಾನ್ ಕಣಿವೆಯಲ್ಲಿ ಚೀನಾ ಪಡೆಗಳು ತಮ್ಮ ಧ್ವಜವನ್ನು ಹಾರಿಸಿದ ವರದಿಗಳ ಕುರಿತು ಕೇಂದ್ರವನ್ನು ಪ್ರಶ್ನಿಸಿದ್ದರು.

Share