Connect with us


      




ವಿದೇಶ

ಉಕ್ರೇನ್ ಶಸ್ತ್ರಾಸ್ತ್ರ ತ್ಯಜಿಸಿದರೆ ಮಾತುಕತೆಗೆ ಸಿದ್ಧ: ರಷ್ಯಾ ವಿದೇಶಾಂಗ ಸಚಿವ

Vanitha Jain

Published

on

ಮಾಸ್ಕೋ: ಫೆಬ್ರವರಿ 25 (ಯು.ಎನ್.ಐ.) ರಷ್ಯಾ ತನ್ನ ಸೇನಾ ಕಾರ್ಯಾಚರಣೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದು, ಉಕ್ರೇನ್ ಶಸ್ತ್ರಾಸ್ತ್ರ ತ್ಯಜಿಸಿದರೆ ಮಾತುಕತೆಗೆ ಸಿದ್ಧ ಎಂದು ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ.

ಉಕ್ರೇನಿಯನ್ ಸೇನೆಯು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರೆ ಮಾಸ್ಕೋ ಮಾತುಕತೆಗೆ ಸಿದ್ಧವಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ. ರಷ್ಯಾ ಈಶಾನ್ಯ ಮತ್ತು ಪೂರ್ವದಿಂದ ಕೈವ್ ಕಡೆಗೆ ನುಗ್ಗುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ.

ಉಕ್ರೇನ್‌ನಲ್ಲಿ ನಾಗರಿಕ ಮೂಲಸೌಕರ್ಯಗಳ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸುವಾಗ ಇದು ನಾಗರಿಕರನ್ನು ‘ರಕ್ಷಿಸುವ’ ಉದ್ದೇಶ ಹೊಂದಿದೆ ಎಂದು ಹೇಳಿದ್ದರು ಎಮದು ಪುಟಿನ್ ನಿರ್ಧಾರವನ್ನು ಸಮರ್ಥಿಸಿಕೊಂಡರು.

25 ಉಕ್ರೇನ್ ನಾಗರಿಕರ ಹತ್ಯೆ

ರಷ್ಯಾದ ಸೇನಾ ದಾಳಿಯ ಮಧ್ಯೆ ಉಕ್ರೇನ್‌ನಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಮತ್ತು 102 ಜನರು ಗಾಯಗೊಂಡಿದ್ದಾರೆ ಎಂದು ಯುಎನ್ ಮಾನವ ಹಕ್ಕುಗಳ ಕಚೇರಿ ತಿಳಿಸಿದೆ.

Share