Connect with us


      
ಬೆಂಗಳೂರು

ಕಂದಾಯ ಸಚಿವ ಆರ್. ಅಶೋಕ್‍ಗೆ ಕೋವಿಡ್ ದೃಢ

Published

on

ಬೆಂಗಳೂರು: ಜನೆವರಿ 07 (ಯು.ಎನ್.ಐ.) ಕಂದಾಯ ಸಚಿವ ಆರ್. ಅಶೋಕ್ ಕೋವಿಡ್-19 ಸೋಂಕಿಗೆ ಒಳಗಾಗಿದ್ದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಬೆಂಗಳೂರು

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಪೂರ್ವ ಸಿದ್ದತೆ ಸಭೆ

Published

on

ಬೆಂಗಳೂರು:ಜನೆವರಿ ೨೬ (ಯು.ಎನ್.‌ಐ.) ಇಂದು ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ, ಬಿಜೆಪಿ ರಾಜ್ಯಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಪೂರ್ವಸಿದ್ಧತಾ ಸಭೆ ನಡೆದಿದೆ.ಈ ಸಭೆಯಲ್ಲಿ ಬೆಂಗಳೂರು ಕೇಂದ್ರ ಹಾಗೂ ದಕ್ಷಿಣ ವಿಭಾಗದ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು.

ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರು ಮಾತನಾಡಿದರು. ನಿನ್ನೆ, ಇಂದು ಪದಾಧಿಕಾರಿಗಳ ಸಭೆ ನಡೆಸಲಾಯ್ತು. ಇಂದು ಬಿಬಿಎಂಪಿ ಮೂರು ಜಿಲ್ಲೆಯಾಗಿ ವಿಭಜಿಸಿದ್ದು, ಬೆಂಗಳೂರು ಉತ್ತರ, ಕೇಂದ್ರ, ದಕ್ಷಿಣ ಮೂರು ಸಭೆ ಮಾಡಲಾಗಿದೆ. ಶಾಸಕರು, ಸಚಿವರು, ಲೋಕಸಭಾ ಸದಸ್ಯರು ಚರ್ಚೆ ಮಾಡಿದ್ದೇವೆ. ಪಕ್ಷ ಸಂಘಟನೆ, ವಾರ್ಡ್, ಗ್ರೂಪ್ ಮಟ್ಟದ ಸಬಲೀಕರಣ ಮಾಡಲು ನಿರ್ಧಾರ. ಸಮಸ್ಯೆಗಳ ಬಗ್ಗೆ ಉತ್ತಮ ರೀತಿಯಲ್ಲಿ ಚರ್ಚೆಯಾಗಿದೆ.. ಬಿಜೆಪಿ ಅತ್ಯಂತ ಸದೃಢವಾಗಿದೆ.. ಕಳೆದ‌ಬಾರಿಯೂ ಹೆಚ್ಚು ಬಿಬಿಎಂಪಿ ಸದಸ್ಯರ ಆಯ್ಕೆಯಾಗಿದೆ. ಈ ಬಾರಿಯೂ ಅಧಿಕಾರಕ್ಕೆ ಬರಲು ಎಲ್ಲಾ ತಯಾರಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಸಭೆ ಬಳಿಕ ಸಂಸದ ತೇಜಸ್ವಿ ಸೂರ್ಯ ಮಾತನಾಡಿದರು. ಸಿಎಂ ನೇತೃತ್ವದಲ್ಲಿ ಬಿಬಿಎಂಪಿ ವಿಚಾರ ಸುಧೀರ್ಘ ಚರ್ಚೆ ನಡೆದಿದೆ. ಬಿಬಿಎಂಪಿ ಚುನಾವಣೆ ಸಂಬಂಧ ಪಕ್ಷ ಮತ್ತು ಸಂಘಟನೆ ಹೇಗೆ ಮಾಡಬೇಕು ಅಂತ ಚರ್ಚೆ ಮಾಡಲಾಯ್ತು. ಬೆಂಗಳೂರಿಗೆ ಬಿಜೆಪಿ ಕೊಡುಗೆ ಅನೇಕ ಇದೆ. ಕಾವೇರಿ, ಮೆಟ್ರೋ, ಸಬ್ ಅರ್ಬನ್ ಎಲ್ಲವೂ ಬಿಜೆಪಿ ಅಧಿಕಾರದಲ್ಲಿದ್ದಾಗ ಬಂದಿದೆ. ಅಭಿವೃದ್ಧಿ ಕೆಲಸದ ವೇಗ ಹೇಗೆ ಹೆಚ್ಚಿಸೋದು ಅಂತ ಚರ್ಚೆಯಾಗಿದೆ. ಈಗಲೂ ಜನ ಹೇಗೆ ಸಮಸ್ಯೆ ಹೇಗೆ ಎದುರಿಸುತ್ತಿದ್ದಾರೆ ಅಂತ ಚರ್ಚೆ ನಡೆಸಲಾಯ್ತು. ಸಿಎಂ‌ ಅವರೇ ಕೂತು ಸಮಸ್ಯೆ ಆಲಿಸಿದ್ರು ಎಂದು ವಿವರ ನೀಡಿದರು.

ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆಯಬೇಕು. ಈಗಾಗಲೇ ಪಕ್ಷದಿಂದ ಕಾರ್ಯಕರ್ತರನ್ನ ಹುರಿದುಂಬಿಸೋ ಕೆಲಸ ಆಗುತ್ತಿದೆ. ಪಕ್ಷದ ಜವಾಬ್ದಾರಿ ನೀಡಿ ಕೆಲಸ ತೆಗೆಸಲಾಗ್ತಿದೆ. ಸಮಸ್ಯೆಗಳನ್ನು ಬಗ್ಗೆ  ಗಮನಕ್ಕೆ ತರಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಒಂದು ವಾರದಲ್ಲಿ  ಸಮಸ್ಯೆ ಬಗೆಹರಿಸಲು ನಿರ್ಧಾರ ಮಾಡಲಾಗಿದೆ ಎಂದರು.

ಚುನಾವಣೆ ಎಷ್ಟು ಸೀಟಿಗೆ ಆಗಬೇಕು ಅನ್ನೋದು ಕೋರ್ಟ್ ಸೂಚಿಸಲಿದೆ. ಅತಿ ಹೆಚ್ಚು ಸೀಟ್ ಗೆಲ್ಲುವುದು ನಮ್ಮ ಪಕ್ಷದ ಕೆಲಸ. ಹೀಗಾಗಿ ಪಕ್ಷ ಸಂಘಟನೆ ಮಾಡಲಾಗುವುದು. ಹಿಂದಿನ ಸರ್ಕಾರ ಅಥವಾ ಈಗಿನ ಸರ್ಕಾರ ಇರಬಹುದು. ಯಾವ್ಯಾವ ಪಕ್ಷ ಬೆಂಗಳೂರಿಗೆ ಏನು ನೀಡಿದೆ ಅಂತ ಜನರ ಮುಂದೆ ಇಡ್ತೀವಿ. ಅದರ ಮೂಲಕವೇ ಜನರಿಂದ ಮತ ಪಡೆದು ಅಧಿಕಾರ ಹಿಡಿಯುತ್ತೇವೆ ಎಂದು ತಿಳಿಸಿದರು.

Continue Reading

ಬೆಂಗಳೂರು

ಮುಂದಿನ ಮೂರು ತಿಂಗಳಲ್ಲಿ 5 ಉಪಗ್ರಹ ಉಡಾವಣೆಗೊಳಿಸಲಿದೆ ಇಸ್ರೋ!

Published

on

ನವದೆಹಲಿ: ಜನೆವರಿ 26 (ಯು.ಎನ್.ಐ.) ಮುಂಬರುವ ಮೂರು ತಿಂಗಳಲ್ಲಿ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಐದು ಪ್ರಮುಖ ಉಪಗ್ರಹ ಉಡಾವಣೆ ಮಾಡಲಿದೆ ಎಂದು ಹಿರಿಯ ರಾಕೆಟ್ ವಿಜ್ಞಾನಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ ಜಿತೇಂದ್ರ ಸಿಂಗ್ ವಿವರಿಸಿದರು.

ಕೊರೋನಾ, ಸತತ ಲಾಕ್‌ಡೌನ್‌ಗಳಿಂದ ವಿಳಂಬಗೊಂಡಿದ ಇಸ್ರೋ ಕಾರ್ಯಚಟುವಟಿಕೆಗಳು ಇಸ್ರೋ ಹೊಸ ಮುಖ್ಯಸ್ಥರಾದ ಡಾ ಎಸ್ ಸೋಮನಾಥ್ ವೇಗವನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಿರುವ ಅವರು ಮುಂದಿನ ಮೂರು ತಿಂಗಳ ಅವಧಿಯಲ್ಲಿ ಮುಂಬರುವ ಕಾರ್ಯಾಚರಣೆಗಳ ಕುರಿತು ಇಸ್ರೋ ಅಧ್ಯಕ್ಷರು ಸಂಕ್ಷಿಪ್ತವಾಗಿ ಪ್ರಸ್ತುತಪಡಿಸಿದರು. ಇದರಲ್ಲಿ ಈ ವರ್ಷದ ಫೆಬ್ರವರಿಯಲ್ಲಿ RICAT-1A PSLV C5-2, OCEANSAT-3, ಮಾರ್ಚ್ನಲ್ಲಿ INS 2B ಆನಂದ್ PSLV C-53 ಉಡಾವಣೆ ಮತ್ತು ಏಪ್ರಿಲ್ ನಲ್ಲಿ SSLV-D1 ಮೈಕ್ರೋ SAT ಉಡಾವಣೆಗೊಳ್ಳಲಿದೆ. ಏತನ್ಮಧ್ಯೆ, ಇಸ್ರೋ GSAT-21 ಅನ್ನು ಸಹ ಉಡಾವಣೆ ಮಾಡಲಿದೆ ಎಂದು ಹೇಳಿದರು.

GSAT-21 ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ (NSIL)ನ ಸಂಪೂರ್ಣ ಅನುದಾನಿತ ಮೊದಲ ಉಪಗ್ರಹ. ಡೈರೆಕ್ಟ್ ಟು ಹೋಮ್ (DTH) ಅಪ್ಲಿಕೇಶನ್ ಅಗತ್ಯಗಳನ್ನು ಪೂರೈಸಲು ಸಂವಹನ ಉಪಗ್ರಹವನ್ನು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅಭಿವೃದ್ಧಿಪಡಿಸುತ್ತದೆ ಮತ್ತು ನಿರ್ವಹಿಸುತ್ತದೆ ಎಂದು ಹೇಳಿದರು.

ಸಭೆಯ ನಂತರ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಾಹ್ಯಾಕಾಶ ಕಾರ್ಯಕ್ರಮಗಳಿಗೆ ವಿಶೇಷ ಉತ್ತೇಜನ ನೀಡಲಾಗಿದೆ ಮತ್ತು ರಸ್ತೆಗಳು ಮತ್ತು ಹೆದ್ದಾರಿಗಳು, ರೈಲ್ವೆಗಳು, ಆರೋಗ್ಯ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನವನ್ನು ಅನ್ವಯವಾಗುವಂತೆ ಮಾಡಲಾಗಿದೆ. “ಮುಂದಿನ ಕೆಲವು ವರ್ಷಗಳಲ್ಲಿ, ಭಾರತವು ಬಾಹ್ಯಾಕಾಶದಲ್ಲಿ ಮೈಲಿಗಲ್ಲು ಸಾಧಿಸಲಿದೆ ಎಂದು ಹೇಳಿದರು.

ಮೊದಲ ಸ್ಥಿತಿಯತ್ತ ಗಗನ್ ಯಾನ್

ಭಾರತದ ಚೊಚ್ಚಲ ಮಾನವಸಹಿತ ಮಿಷನ್ ಗಗನ್ ಯಾನ್ ಕುರಿತು ಸಚಿವರಿಗೆ ವಿವರಿಸಿದ ಸೋಮನಾಥ್, ಕೋವಿಡ್ -19 ಮತ್ತು ಇತರ ನಿರ್ಬಂಧಗಳಿಂದಾಗಿ ವಿಳಂಬವಾಗಿದೆ. ಆದರೆ ಈಗ ಮೊದಲ ಮಾನವರಹಿತ ಮಿಷನ್‌ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಇಸ್ರೋ 2022ರಲ್ಲಿ ಗಗನ್ ಯಾನ್ ಅಡಿಯಲ್ಲಿ ಸಿಬ್ಬಂದಿಗಳಿಲ್ಲದ ಮೊದಲ ಮಿಷನ್ ಅನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಅದರ ನಂತರ ಎರಡನೇ ಮಾನವರಹಿತ ಮಿಷನ್ “ವ್ಯೋಮಿತ್ರ” ಅನ್ನು ರೋಬೋಟ್ ಒಯ್ಯುತ್ತದೆ. ನಂತರ ಮಾನವಸಹಿತ ಮಿಷನ್ ಅನ್ನು ಬೆಂಬಲಿಸುತ್ತದೆ. ಆಯ್ಕೆಯಾದ ಭಾರತೀಯ ಗಗನಯಾತ್ರಿಗಳು ರಷ್ಯಾದಲ್ಲಿ ಜೆನೆರಿಕ್ ಬಾಹ್ಯಾಕಾಶ ಹಾರಾಟದ ತರಬೇತಿಯನ್ನು ಯಶಸ್ವಿಯಾಗಿ ಪಡೆದಿದ್ದಾರೆ ಮತ್ತು ಬೆಂಗಳೂರಿನಲ್ಲಿ ತಾತ್ಕಾಲಿಕ ಗಗನಯಾತ್ರಿ ತರಬೇತಿ ಕೇಂದ್ರವನ್ನು ಸಹ ಸ್ಥಾಪಿಸಲಾಗಿದೆ ಎಂದು ಇಸ್ರೋ ಅಧ್ಯಕ್ಷರು ಹೇಳಿದರು.

Continue Reading

ಬೆಂಗಳೂರು

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತರಿಗೆ ಕೋವಿಡ್

Published

on

ಬೆಂಗಳೂರು: ಜನೆವರಿ 26 (ಯು.ಎನ್.ಐ.) ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅವರಿಗೆ ಕೋವಿಡ್ ದೃಢಪಟ್ಟಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿವೆ ಎಂದು ಹೇಳಿದ್ದಾರೆ.

ಕೋವಿಡ್ ಪಾಸಿಟಿವ್ ಬಂದ ಕಾರಣ ನಾನು ವೈದ್ಯಕೀಯ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿ ಇದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತೇನೆ ಎಂದು ಟ್ವಿಟರ್ ನಲ್ಲಿ ಹೇಳಿದ್ದಾರೆ.

 

ಕೋವಿಡ್ ಸೋಂಕು ಕಾಣಿಸಿಕೊಂಡ ಕಾರಣ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗೌರವ ಗುಪ್ತ ಅವರ ಬದಲು ಆಡಳಿತಾಧಿಕಾರಿ ರಾಕೇಶ್ ಸಿಂಗ್ 73ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

Continue Reading
Advertisement
ದೇಶ13 mins ago

ಅಧಿಕೃತವಾಗಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಕಂಪೆನಿ ಹಸ್ತಾಂತರ

ನವದೆಹಲಿ: ಜನೆವರಿ 27  (ಯು.ಎನ್.ಐ.) ಕೇಂದ್ರ ಸರ್ಕಾರವು ಗುರುವಾರ ಅಧಿಕೃತವಾಗಿ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಿದೆ. 69 ವರ್ಷಗಳ ಬಳಿಕ ಪುನಃ ಟಾಟಾ ಮಡಿಲಿಗೆ ಏರ್...

ಕರ್ನಾಟಕ37 mins ago

ಉ.ಪ್ರ.‌ಚುನಾವಣೆ ನಂತರ ರಾಜ್ಯದಲ್ಲಿ‌ಮಹತ್ವದ ಬದಲಾವಣೆ: ಸಿ.ಎಂ ಇಬ್ರಾಹಿಮ್

ಬೆಂಗಳೂರು: ಜನೆವರಿ 27 (ಯು.ಎನ್.ಐ.)‌ ನಾನು ಹೇಳಿದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಘಟಿಸುತ್ತಾ ಬಂದಿವೆ.‌ ಉತ್ತರ ಪ್ರದೇಶ ಚುನಾವಣಾ ಬಳಿಕ ಸಾರ್ವತ್ರಿಕ ಚುನಾವಣೆ, ಇಲ್ಲವೇ ರಾಷ್ಟ್ರ ಪತಿ...

ದೇಶ51 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ2 hours ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ3 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ3 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ4 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ4 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಟ್ರೆಂಡಿಂಗ್

Share