Published
6 months agoon
By
UNI Kannadaದಾವಣಗೆರೆ, ನ 16 (ಯುಎನ್ಐ) ಪ್ರತಿವರ್ಷ ಏಪ್ರಿಲ್ ೧ರಂದು ದೇಶದಾದ್ಯಂತ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ – ಆರ್ಟಿಇ ದಿನ ಆಚರಿಸಲಾಗುತ್ತಿದ್ದು, ಮುಂದಿನ ವರ್ಷದ ಏಪ್ರಿಲ್ ೧ರಂದು ಬೆಂಗಳೂರಿನಲ್ಲಿ ಆರ್ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಬಿ.ಎನ್. ಯೋಗಾನಂದ ಹೇಳಿದ್ದಾರೆ.
ದಾವಣಗೆರೆಯಲ್ಲಿ ನಡೆದ ಆರ್ಟಿಇ ಅನುಷ್ಠಾನ ಕುರಿತ ರಾಜ್ಯಮಟ್ಟದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ‘ಖಾಸಗಿ ಶಾಲೆಗಳಲ್ಲಿ 9ನೇ ತರಗತಿಯಿಂದ ದುಬಾರಿ ಶುಲ್ಕವನ್ನು ವಾಪತಿಸಲಾಗದೇ ಬಡ ವಿದ್ಯಾರ್ಥಿಗಳು ಶಿಕ್ಷಣವನ್ನು ಮಧ್ಯದಲ್ಲೇ ಮೊಟಕುಗೊಳಿಸುತ್ತಿರುವುದರಿಂದ ರಾಜ್ಯ ಸರ್ಕಾರ ಮಾನವೀಯ ದೃಷ್ಟಿಯಿಂದ ಶಿಕ್ಷಣ ಹಕ್ಕು ಕಾಯ್ದೆ ಸೌಲಭ್ಯವನ್ನು ಎಸ್ಸೆಸ್ಸೆಲ್ಸಿವರೆಗೂ ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.
‘ಪ್ರತಿ ವರ್ಷ ರಾಜ್ಯದ ೧ ಸಾವಿರ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದೆ ಎಂದರು. ಸಭೆಯಲ್ಲಿ ರಾಜ್ಯದ ೨೪ ಶೈಕ್ಷಣಿಕ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.