Connect with us


      




ಜಾನಪದ

SA Vs IND: ಟೀಂ ಇಂಡಿಯಾ ಆಟಗಾರರಿಗೆ ದ್ರಾವಿಡ್ ಸ್ಪೆಷಲ್ ಕ್ಲಾಸ್..

Published

on

 

ಸೆಂಚುರಿಯನ್‌, ಡಿ 25(ಯುಎನ್‌ ಐ) ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಸಕಲ ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಡಿಸೆಂಬರ್ 26 ರಂದು ಸೆಂಚುರಿಯನ್ ಮೈದಾನದಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಂಡದ ಆಟಗಾರರತ್ತ ವಿಶೇಷ ಗಮನ ಹರಿಸಿದ್ದಾರೆ . ಅದೇ ರೀತಿ ಈ ಪಂದ್ಯಕ್ಕಾಗಿ ಆಟಗಾರರೊಂದಿಗೆ ದ್ರಾವಿಡ್ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಅಭ್ಯಾಸದ ಭಾಗವಾಗಿ ಎರಡು ವೈಟ್ ಬೋರ್ಡ್‌ ಗಳನ್ನು ತಂದು ದ್ರಾವಿಡ್ ಆಟಗಾರರಿಗೆ ಸ್ಪೆಷಲ್ ಕ್ಲಾಸ್ ತೆಗೆದುಕೊಂಡರು.

 

ಸ್ಪೆಷಲ್ ಕ್ಲಾಸ್ ಗೆ ನಾಯಕ ವಿರಾಟ್‌ ಕೊಹ್ಲಿ ಸೇರಿದಂತೆ ತಂಡದ ಎಲ್ಲಾ ಆಟಗಾರರು ಭಾಗವಹಿಸಿದ್ದರು. ಈ ಸೆಷನ್‌ ಭಾಗವಾಗಿ ಅವರು ಆಟಗಾರರಿಗೆ ನಿರ್ದೇಶನ ನೀಡಿದರು. ಪಂದ್ಯದಲ್ಲಿ ಅನುಸರಿಸಬೇಕಾದ ಮಾರ್ಗಗಳ ಕುರಿತು ದ್ರಾವಿಡ್ ಆಟಗಾರರೊಂದಿಗೆ ಚರ್ಚಿಸಿದರು. ಭಾರತದ ಮಾಜಿ ಮುಖ್ಯ ಕೋಚ್ ಗ್ಯಾರಿ ಕರ್ಸ್ಟನ್ ಈ ಹಿಂದೆ ಇಂತಹ ಸೆಷನ್‌ಗಳನ್ನು ತೆಗೆದುಕೊಂಡಿದ್ದರು. ಆದರೆ, ಸಫಾರಿ ನೆಲದಲ್ಲಿ ಭಾರತ ತಂಡ ಇದುವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. ಇದರೊಂದಿಗೆ ಕೋಚ್ ದ್ರಾವಿಡ್ ಜೊತೆಗೆ ನಾಯಕ ಕೊಹ್ಲಿ ಈ ಸರಣಿಯತ್ತ ವಿಶೇಷ ಗಮನ ಹರಿಸಿದ್ದಾರೆ.

 

ಭಾರತ ತಂಡ (ಅಂದಾಜು): ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

 

ಆರೋಗ್ಯ

ಏಮ್ಸ್‌ನಲ್ಲಿ 250 ವೈದ್ಯರು, ಸಿಬ್ಬಂದಿಗೆ ಕೊರೊನಾ … OPD ಸೇವೆ ಸ್ಥಗಿತ

Published

on

By

ಭುವನೇಶ್ವರ, ಜ 17(ಯುಎನ್‌ ಐ) ಒಡಿಶಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಲ್ಲಿ ಸುಮಾರು 250 ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ.
ಇದರಿಂದಾಗಿ ಹೊರ ರೋಗಿಗಳ ಚಿಕಿತ್ಸಾ ವಿಭಾಗ (ಒಪಿಡಿ) ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಪ್ರೊಫೆಸರ್ ಸಚ್ಚಿದಾನಂದ ಮೊಹಾಂತಿ ಹೇಳಿದ್ದಾರೆ. ತುರ್ತು ಪ್ರಕರಣಗಳಿಗೆ ಒಳರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. ಕೋವಿಡ್ ಸೋಂಕಿನಿಂದ ಆಸ್ಪತ್ರೆಯನ್ನು ಸುಗಮವಾಗಿ ನಡೆಸಲು ಒಪಿಡಿ ಸೇವೆಗಳನ್ನು ಸ್ಥಗಿತಗೊಳಿಸಬೇಕಾಯಿತು ಎಂದು ಅವರು ಹೇಳಿದ್ದಾರೆ. ಭುವನೇಶ್ವರ್ ಏಮ್ಸ್‌ನಲ್ಲಿ ಸ್ವಾಸ್ಥ್ಯ ಆಪ್, ಟೆಲಿಮೆಡಿಸಿನ್ ವಾಟ್ಸಾಪ್ ಕರೆ ಸೇವೆಗಳು ಮೊದಲಿನಂತೆ ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Continue Reading

ಕರ್ನಾಟಕ

ಒಂದು ವರ್ಷದಲ್ಲಿ 156 ಕೋಟಿ ಲಸಿಕೆ: ಪ್ರಪಂಚದಲ್ಲೇ ಅಗ್ರಸ್ಥಾನದ ಹಿರಿಮೆ

Published

on

ಬೆಂಗಳೂರು : ಜನೆವರಿ 16 (ಯು.ಎನ್.ಐ.) ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಖುದ್ದು ಆಸಕ್ತಿಯೊಂದಿಗೆ ಆರಂಭವಾದ ಲಸಿಕಾ ಅಭಿಯಾನದ ಮೂಲಕ ಒಂದು ವರ್ಷದ ಅವಧಿಯಲ್ಲಿ 156 ಕೋಟಿ ಲಸಿಕೆಗಳನ್ನು ಕೊಡಲಾಗಿದ್ದು, ಭಾರತವು ಇಡೀ ಪ್ರಪಂಚದಲ್ಲಿ ಅತಿ ಹೆಚ್ಚು ಲಸಿಕೆಗಳನ್ನು ಕೊಟ್ಟ ರಾಷ್ಟ್ರವೆಂಬ ಹಿರಿಮೆಗೆ ಪಾತ್ರವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಐಟಿ/ಬಿಟಿ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು.

ಲಸಿಕಾ ಅಭಿಯಾನ ಶುರುವಾಗಿ ಒಂದು ವರ್ಷವಾಗಿದ್ದು, ದೇಶದಲ್ಲಿ ಕೊಡಲಾಗಿರುವ 156 ಕೋಟಿ ಲಸಿಕೆಗಳ ಪೈಕಿ 99 ಕೋಟಿ ಲಸಿಕೆಗಳು ಗ್ರಾಮೀಣ ಭಾಗದಲ್ಲಿ ಬಳಕೆಯಾಗಿವೆ. ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಬಹುತೇಕ ಲಸಿಕೆ ತೆಗೆದುಕೊಂಡಿದ್ದು, ಸಮಾಜದ ವಿವಿಧ ವಲಯಗಳ ಬೆಂಬಲದಿಂದ ಈ ಯಶಸ್ಸು ಸಾಧ್ಯವಾಗಿದೆ ಎಂದ ಸಚಿವರು, ಇದಕ್ಕಾಗಿ ಪ್ರಧಾನಿಯವರನ್ನು ಅಭಿನಂದಿಸಿದರು.

ಲಸಿಕಾ ಅಭಿಯಾನ ಯಶಸ್ವಿಯಾಗಿರುವುದರಿಂದ ಸೋಂಕಿನ ಮಧ್ಯೆಯೂ ನಾವು ಹೆಚ್ಚು ಆತಂಕವಿಲ್ಲದೆ ಬದುಕಲು ಸಾಧ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

Continue Reading

ಕರ್ನಾಟಕ

ಮೇಕೆದಾಟು ಪಾದಯಾತ್ರೆ ಕೈಬಿಡುವಂತೆ ಸಿದ್ದರಾಮಯ್ಯಗೆ ಎಸ್.ಎಂ.ಕೃಷ್ಣ ಪತ್ರ

Published

on

ಬೆಂಗಳೂರು : ಜನೆವರಿ 12 (ಯು.ಎನ್.ಐ.) ನಾಡಿನ ಜನರ ಆರೋಗ್ಯ ದೃಷ್ಟಿಯಿಂದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆಗ್ರಹಿಸಿದ್ದಾರೆ. ಪಾದಯಾತ್ರೆಯನ್ನು ಏಕೆ ನಿಲ್ಲಿಸಬೇಕೆಂಬ ಬಗ್ಗೆ ಸುದೀರ್ಘ ಪತ್ರ ಬರೆದಿರುವ ಎಸ್.ಎಂ.ಕೃಷ್ಣ, ಮೇಕೆದಾಟು ಯೋಜನೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪತ್ರದ ಮುಖೇನ ತಿಳಿಸಿದ್ದಾರೆ.

ಎಸ್.ಎಂ.ಕೃಷ್ಣ ಅವರು ಬರೆದಿರುವ ಪತ್ರದಲ್ಲಿ, “ಸಿದ್ದರಾಮಯ್ಯ ನೇತೃತ್ವದಲ್ಲಿ ಮೇಕೆದಾಟು ಸಂಗಮದಿಂದ ಬೆಂಗಳೂರಿನವರೆಗೆ ಬೆಂಗಳೂರಿನ ಭವಿಷ್ಯ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬವಣಿಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯದ ಬಹುದಿನಗಳ ಬೇಡಿಕೆಯಾದ ಮೇಕವಾಟು ಅಣೆಕಟ್ಟು ನಿರ್ಮಾಣ ಸಂಬಂಧ ಸರ್ಕಾರಗಳ ಗಮನ ಸೆಳೆಯಲು ತಾವು “ ನೀರಿಗಾಗಿ ನಡಿಗೆ ” ಪಾದಯಾತ್ರೆ ಕೈಗೊಂಡಿದ್ದೀರಿ . ಈ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಂಪೂರ್ಣ ಸಹಮತವಿದೆ.

ಇದೇ ಸಂದರ್ಭದಲ್ಲಿ ಮನುಕುಲಕ್ಕೆ ಗಂಡಾಂತರವಾಗಿ ಕಾಡುತ್ತಿರುವ ಕೋವಿಡ್ ವೈರಸ್ ತನ್ನ ಕಬಂಧ ಬಾಹುಗಳನ್ನು ಬಿತ್ತರಿಸುತ್ತಾ ವಿವಿಧ ರೀತಿಯಲ್ಲಿ ರೂಪಾಂತರಗೊಂಡು ನಮ್ಮನ್ನು ಕಾಡುತ್ತಿದೆ. ಇದರ ಬೇನೆಯಿಂದ ಇಡೀ ಪ್ರಪಂಚ ನಲುಗಿ ಹೋಗಿದ್ದು ಹಲವು ಸಾವು ನೋವುಗಳು ಸಂಭವಿಸಿ ಅನಾಹುತ ಸೃಷ್ಟಿಸಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಎಷ್ಟೇ ಪ್ರಯತ್ನಿಸಿದರೂ ಇನ್ನು ತಹಬದಿಗೆ ಬಂದಿಲ್ಲ .

ಬೆಂಗಳೂರು ವಿಶ್ವದ ನಗರಗಳ ಪಟ್ಟಿಯಲ್ಲಿ ಸ್ಥಾನಗಳಿಸಿದ್ದು , ಪ್ರಪಂಚದ ನಾನಾ ಮೂಲೆಗಳಿಂದ ಪ್ರತಿನಿತ್ಯ ಜನರು ಬಂದು ಹೋಗುತ್ತಿದ್ದಾರೆ. ಇದರ ಮಧ್ಯೆ ಕೊರೊನಾ ವೈರಸ್ ವೇಗವಾಗಿ ಹಬ್ಬುತ್ತಿದೆ . ಇಂತಹ ಸಂದರ್ಭದಲ್ಲಿ ತಾವು ಕೈಗೊಂಡಿರುವ ಪಾದಯಾತ್ರೆ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಅಡ್ಡಿಪಡಿಸುವ ಸಾಧ್ಯತೆ ಇದೆ . ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಲು ಒಪ್ಪಿಗೆ ಸೂಚಿಸಿರುವುದರಿಂದ ಹಾಗೂ ನಾಡಿನ ಜನರ ಆರೋಗ್ಯ ಕಾಪಾಡುವ ಹಿತದೃಷ್ಠಿಯಿಂದ ನಿಮ್ಮ ಪಾದಯಾತ್ರೆಯನ್ನು ಮೊಟಕುಗೊಳಸಬೇಕೆಂದು ಕೋರುತ್ತೇನೆ ಎಂದು ಎಸ್.ಎಂ.ಕೃಷ್ಣ ಮನವಿ ಮಾಡಿಕೊಂಡಿದ್ದಾರೆ.

Continue Reading
Advertisement
ದೇಶ7 mins ago

ದಲಿತ ನಾಯಕ ರೋಹಿತ್ ಮೇಮುಲ ಪ್ರತಿರೋಧದ ಸಂಕೇತ: ರಾಹುಲ್ ಗಾಂಧಿ

ನವದೆಹಲಿ: ಜನೆವರಿ 17 (ಯು.ಎನ್.ಐ.) ದಲಿತ ನಾಯಕ ರೋಹಿತ್ ಮೇಮುಲ ಪ್ರತಿರೋಧದ ನಾಯಕ ಮತ್ತು ಸಂಕೇತ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ವೇಮುಲಾ...

ಕರ್ನಾಟಕ34 mins ago

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು...

ದೇಶ47 mins ago

ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ

ಚಂಡೀಗಢ: ಜನೆವರಿ 17 (ಯು.ಎನ್.ಐ.) ಪಂಜಾಬ್‌ನಲ್ಲಿ ಫೆಬ್ರವರಿ 20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಗುರು ರವಿದಾಸ್ ಜಯಂತಿ ಆಚರಣೆಗೆ ಅನುಕೂಲ...

ದೇಶ49 mins ago

ದೇಶವನ್ನು ಕೊರೋನಾ ಮುಕ್ತಗೊಳಿಸಲು ಪಣ ತೊಡೋಣ; ಕೇಜ್ರಿವಾಲ್

ನವದೆಹಲಿ: ಜನೆವರಿ 17 (ಯು.ಎನ್.ಐ.) ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯನ್ನು ಆಪಾದನೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ತೊಡೆದುಹಾಕು ಪಣ ತೊಡಬೇಕು ಎಂದು...

ಸಿನೆಮಾ1 hour ago

ಹಿಂದಿಯಲ್ಲಿ ತೆರೆ ಕಾಣುತ್ತಿದೆ ಅಲ್ಲು ಅರ್ಜುನ್‌ ಅಭಿನಯದ ‘ಅಲಾ ವೈಕುಂಠಪುರಮುಲು’

ಹೈದರಾಬಾದ್: ಜನೆವರಿ 17 (ಯು.ಎನ್.ಐ.) ಇದೀಗ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನಿಮಾದ ಯಶಸ್ಸಿನಲ್ಲಿದ್ದಾರೆ. ಮತ್ತೊಂದು ಸಂತೋಷದ ವಿಚಾರವೆಂದರೆ ಅಲ್ಲು ಅರ್ಜುನ್‌...

ದೇಶ1 hour ago

ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನ

ಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್‌ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು...

ದೇಶ1 hour ago

ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ನಿಧನ: ಮೋದಿ ಸಂತಾಪ

ರಾಯಗಡ: ಜನೆವರಿ ೧೭ (ಯು.ಎನ್.ಐ.) ಪದ್ಮಶ್ರೀ ಪುರಸ್ಕೃತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ....

ಕರ್ನಾಟಕ2 hours ago

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ...

ಬೆಂಗಳೂರು2 hours ago

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್

ಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ...

ದೇಶ2 hours ago

ಉಪಯುಕ್ತ ಮಾಹಿತಿ ; 5 ಸಾವಿರ ಅಲ್ಲ, ಕೇವಲ ₹260 ರಲ್ಲಿ ಒಮೈಕ್ರಾನ್ ಪತ್ತೆ ಹಚ್ಚಿ!

ಬೆಂಗಳೂರು : ಜನೆವರಿ 17 (ಯು.ಎನ್.ಐ.) ಪ್ರತಿ ದಿನ ಒಮೈಕ್ರಾನ್ ಸೋಂಕು ದೇಶದಲ್ಲಿ ವೇಗವಾಗಿ ಹರಡಲಾರಂಭಿಸಿದೆ. ಕೊರೊನಾ ರೂಪಾಂತರಗಳಿಗಿಂತ ಒಮೈಕ್ರಾನ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್‌ನೊಂದಿಗೆ...

ಟ್ರೆಂಡಿಂಗ್

Share