Connect with us


      
ಕರ್ನಾಟಕ

ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ

Vanitha Jain

Published

on

ಬೆಂಗಳೂರು: ಆಗಸ್ಟ್ 15 (ಯು.ಎನ್.ಐ.) ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ 225 ನೇ ಜಯಂತೋತ್ಸವದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ‌ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ನಡೆದ ಸಿಟಿ ರೈಲ್ವೆ ನಿಲ್ದಾಣದ ಬಳಿಯ ಸಂಗೊಳ್ಳಿ ರಾಯಣ್ಣ‌ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಬೊಮ್ಮಾಯಿ ಅವರು, ಸಂಗೊಳ್ಳಿ ರಾಯಣ್ಣನ ಹೋರಾಟವನ್ನ ನಾವೆಲ್ಲರು ಸ್ಮರಿಸಬೇಕು. ಬೆಳಗಾವಿಯಲ್ಲಿ ಸೆಪ್ಟೆಂಬರ್ ನಲ್ಲಿ ಸಂಗೊಳ್ಳಿ ರಾಯಣ್ಣ ಆರ್ಮಿ ಸ್ಕೂಲ್ ಉದ್ಘಾಟನೆ ಆಗಲಿದೆ. 180 ಕೋಟಿಯನ್ನ ಹಿಂದಿನ ಹಾಗೂ ಈಗಿನ ಸರ್ಕಾರ ಖರ್ಚು ಮಾಡಿದೆ ಎಂದು ಹೇಳಿದರು.

ಯಡಿಯೂರಪ್ಪನವರು ಹಾಗೂ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಅನುದಾನ ನೀಡಿದ್ರು. ಕರ್ನಾಟಕ ಭಾಷೆ, ರಾಜ್ಯ, ಗಡಿಭಾಗಗಳಿಗೆ ಹಲವು ಹೋರಾಟಗಳಾಗಿವೆ. ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು. ದೇಶದಲ್ಲಿ ಇವತ್ತು 40 ಕೋಟಿ ಮನೆಗಳ ಮೇಲೆ ತಿರಂಗ ಧ್ವಜ ಹಾರಿದೆ. ದೆಹಲಿಯಲ್ಲಿ ರಾಯಣ್ಣ ಮೂರ್ತಿ ಸ್ಥಾಪನೆಗೆ ತಯಾರಿ ಆಗ್ತಾಯಿದೆ ಎಂದು ಹೇಳಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿಶೇಷ ಆಯುಕ್ತ ದೀಪಕ್, ಚೀಫ್ ಎಂಜಿನಿಯರ್ ಲೋಕೇಶ್ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

Share