Connect with us


      
ನ್ಯಾಯಾಲಯ

ಸುಪ್ರೀಂ ಕೋರ್ಟ್‌ನಲ್ಲೂ ಕೊರೊನಾ ಅಬ್ಬರ .. ನಾಲ್ವರು ನ್ಯಾಯಮೂರ್ತಿಗಳಿಗೆ ಪಾಸಿಟಿವ್

UNI Kannada

Published

on

ನವದೆಹಲಿ, ಜ 9(ಯುಎನ್ ಐ) ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಆರ್ಭಟಿಸುತ್ತಿದೆ. ದಿನ ನಿತ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸುಪ್ರೀಂ ಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಗೆ ಸಂಬಂಧಿಸಿದ 1 50 ಮಂದಿ ಉದ್ಯೋಗಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಎಲ್ಲಾ ನ್ಯಾಯಮೂರ್ತಿಗಳು ಕಳೆದ ಮಂಗಳವಾರ ನ್ಯಾಯಮೂರ್ತಿ ಸುಭಾಷಣ್ ರೆಡ್ಡಿ ಬಿಳ್ಕೋಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದರು . ನಂತರ ಅವರಿಗೆ ಪಾಸಿಟಿವ್ ದೃಢಪಟ್ಟಿತ್ತು. ಆ ನಂತರ .. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಇತರ ನಾಲ್ವರು ನ್ಯಾಯಮೂರ್ತಿಗಳೊಂದಿಗೆ ಕಳೆದ ಗುರುವಾರ ಕೋವಿಡ್ ಹರಡುವಿಕೆ ಕುರಿತು ನಡೆಸಿದ್ದ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಸ್ತುತ ಸಿ ಜೆ ಐ ನ್ಯಾಯಮೂರ್ತಿ ಎನ್‌ ವಿ ರಮಣ ಸೇರಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಒಟ್ಟು 32 ನ್ಯಾಯಮೂರ್ತಿಗಳಿದ್ದು, . ಈ ಪೈಕಿ ನಾಲ್ವರಿಗೆ ವೈರಸ್ ಇರುವುದು ದೃಢಪಟ್ಟಿದೆ ಸುಪ್ರೀಂ ಕೋರ್ಟ್‌ನ ಸುಮಾರು 1 50 ಉದ್ಯೋಗಿಗಳು ಕ್ವಾರಂಟೈನ್‌ಗೆ ತೆರಳಿದ್ದಾರೆ. ದೆಹಲಿ ಸೇರಿದಂತೆ ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ.. ಸುಪ್ರೀಂ ಕೋರ್ಟ್ ವಾರದಲ್ಲಿ ಮೂರು ದಿನ ಮಾತ್ರ ವರ್ಚುವಲ್ ಮಾದರಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸುತ್ತದೆ.
ಸಂಸತ್ತಿನಲ್ಲಿ ದಿಢೀರ್ ನಡೆಸಿದ ಕೋವಿಡ್ ಪರೀಕ್ಷೆಗಳಲ್ಲಿ 400 ಸಿಬ್ಬಂದಿಗೆ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ. ಸೋಂಕು ತಗುಲಿದವರಲ್ಲಿ ಸಚಿವಾಲಯದ, ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 59,632 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 327 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶದಲ್ಲಿ 5 ಲಕ್ಷ 90 ಸಾವಿರದ 611 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ 10ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 3623 ಕ್ಕೆ ತಲುಪಿದೆ.

Share