Connect with us


      




ಕರ್ನಾಟಕ

6ನೇ ತರಗತಿಯಿಂದ ಶಾಲೆ ಮುಚ್ಚುವುದು ಬೇಡ: ಹೊರಟ್ಟಿ

Published

on

ಬೆಂಗಳೂರು: ಜನೆವರಿ 15 (ಯು.ಎನ್.ಐ.) ಮೂರನೇ ಅಲೆಯಲ್ಲಿ ಕೋವಿಡ್ ನ ಗಂಭೀರತೆ ಕಮ್ಮಿ. ಸೋಂಕು ಹರಡೋದು ಜಾಸ್ತಿ ಅಂತ ತಜ್ಞರು ಹೇಳ್ತಿದಾರೆ.. 1-5ನೇವತರಗತಿವರೆಗೆ ಮಾತ್ರ ಶಾಲೆಗಳನ್ನು ಮುಚ್ಚಲಿ. 6 ನೇ ತರಗತಿಗಳಿಂದ ತರಗತಿಗಳು ಮುಚ್ಚುವುದು ಬೇಡ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.

ಅವರಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ಶಾಲೆಗಳನ್ನು ನಡೆಸಲಿ. ಪೋಷಕರ ಆತಂಕವನ್ನು ಸರ್ಕಾರ ದೂರ ಮಾಡಿ 6 ನೇ ತರಗತಿಯಿಂದ ಆರಂಭಿಸಿ ಮುಂದಿನ ಹಂತದ ತರಗತಿಗಳನ್ನು ನಡೆಸಲಿ.  ಶಾಲೆಗಳನ್ನು ಬಂದ್ ಮಾಡಿದರೆ ಮಕ್ಕಳ ಕಲಿಕೆ ಮೇಲೆ ದುಷ್ಪರಿಣಾಮವಾಗುತ್ತದೆ.  ವಿದ್ಯಾಗಮ ಯೋಜನೆಯಿಂದ ಹೆಚ್ಚು ಉಪಯೋಗವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

 ಶಾಲೆಗಳ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಲಿ. ಜಿಲ್ಲಾವಾರು ಡಿಸಿಗಳಿಗೆ ಅಧಿಕಾರ ಕೊಡಲಾಗಿದೆ. ಜಿಲ್ಲಾವಾರು ಅಲ್ಲಲ್ಲಿ ಶಾಲೆಗಳು ಮುಚ್ಚೋದು, ನಡೆಯೋದು ಮಾಡಿದ್ರೆ ಗೊಂದಲ ಉಂಟಾಗುತ್ತದೆ.. ಇಡೀ ರಾಜ್ಯದಲ್ಲಿ ಶಾಲೆಗಳನ್ನು ನಡೆಸುವ ವಿಚಾರದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿ ಎಂದು ಹೊರಟ್ಟಿ ಅವರು ಸರ್ಕಾರಕ್ಕೆ ಸಲಹೆ ಮಾಡಿದರು.

ಆನ್ ಲೈನ್ ತರಗತಿಗಳು ಎಲ್ಲ ಕಡೆ ಯಶಸ್ವಿ ಆಗಲ್ಲ. ನೆಟ್ವರ್ಕ್, ವಿದ್ಯುತ್ ಸಮಸ್ಯೆಗಳಿವೆ. ಹಳ್ಳಿಗಳ ಜನರ ಬಳಿ‌ ಸ್ಮಾರ್ಟ್ ಫೋನ್ ಸಹ ಇರಲ್ಲ. ಆನ್ಲೈನ್ ತರಗತಿಗಳು ನಾಮ್ ಕೆ ವಾಸ್ತೆಗೆ ಮಾತ್ರ. ನಗರಗಳಿಗೆ ಆನ್ಲೈನ್ ಸರಿ ಹೊಂದುತ್ತದೆ. ಗ್ರಾಮೀಣ ಭಾಗಗಳಲ್ಲಿ ಆನ್ ಲೈನ್ ತರಗತಿಗಳು ಯಶಸ್ವಿ ಆಗಲ್ಲ ಎಂದು ಅವರು ಪುನರುಚ್ಚರಿಸಿದರು

ಕರ್ನಾಟಕ

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

Published

on

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದು ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ.

ಒಂದೇ ದಿನದಲ್ಲಿ 287 ಹೊಸ ರೂಪಾಂತರಿ ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಧಾನಿಯಲ್ಲಿ 287 ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಒಟ್ಟಾರೆ ಹೊಸ ತಳಿಯ ಕೇಸ್ ಗಳ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

Continue Reading

ಕರ್ನಾಟಕ

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

Published

on

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
ಪಿಎಂಎಫ್ಎಂಇ ಯೋಜನೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.35 ರಷ್ಟು ಅನುದಾನ ಒದಗಿಸಿತ್ತು. ಇದೀಗ ಸರ್ಕಾರ ರೈತರ ಅನುಕೂಲಕ್ಕಾಗಿ ಶೇ.15 ರಷ್ಟು ಹೆಚ್ಚಿನ ಸಹಾಯಧನ ನೀಡಿದ್ದು, ಈಗ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ.50 ರಷ್ಟಾಗಿದೆ.
ಪ್ರಧಾನ ಮಂತ್ರಿಗಳ ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಶೇ.35 ರಷ್ಟನ್ನು ಒದಗಿಸಿತ್ತು. ಕಳೆದ ಬಾರಿ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ಶೇ.15 ರಷ್ಟು ಸಹಾಯಧನ ನೀಡಿದ್ದು, ಈಗ ಸಹಾಯಧನ ಶೇ.50ಕ್ಕೆ ಹೆಚ್ಚಿದೆ.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ಅಡಿ ಪಿಎಂಎಫ್ಎಂಇ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆಯನ್ನು ರಾಜ್ಯದ ನೋಡಲ್ ಇಲಾಖೆಯನ್ನಾಗಿಯೂ ಕೆಪೆಕ್ ಸಂಸ್ಥೆಯನ್ನು ನೋಡಲ್ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್ಎಂಇ)ಯೋಜನೆಯು 5 ವರ್ಷಗಳ ಅವಧಿಯಲ್ಲಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೂ ಜಾರಿಯಲ್ಲಿರುತ್ತದೆ. 2021-22ನೇ ಸಾಲಿನಲ್ಲಿ 2,651 ವೈಯಕ್ತಿಕ ಉದ್ದಿಮೆದಾರರಿಗೆ ಹಾಗೂ ಗುಂಪುಗಳಿಗಳಿಗೆ 100 ಉದ್ದಿಮೆಗಳ ಸ್ಥಾಪನೆಗೆ ಸಹಾಯಧನ ಒದಗಿಸುವ ಗುರಿ ಹೊಂದಲಾಗಿದೆ.
ಸರ್ಕಾರ ರೈತರ ಅನುಕೂಲಕ್ಕಾಗಿ ಅನುದಾನ ಹೆಚ್ಚಿಸಿರುವುದನ್ನು ಶ್ಲಾಘಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತಾಪಿ ಗುಂಪುಗಳು ಮತ್ತು ವೈಯಕ್ತಿಕ ಉದ್ದಿಮೆದಾರರು ಯೋಜನೆಯ ಸದುಪಯೋಗ ಪಡಿಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

Continue Reading

ಕರ್ನಾಟಕ

ಕೋವಿಡ್‌ ಸೋಂಕು ಹೆಚ್ಚು; ಸಾವು ಕಡಿಮೆ:‌ ಸಚಿವ ಅಶೋಕ್

Published

on

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗಿದೆ.  ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆ ಇದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ತಿಳಿಸಿದರು.

ಅವರಿಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಬೇರೆ ರಾಜ್ಯಗಳಲ್ಲಿ‌ಸೋಂಕು‌ ತಗ್ಗುತ್ತಿದೆ ಎಂದ ಅವರು ಕೋವಿಡ್‌ ನಿಯಂತ್ರಣ ಕುರಿತಂತೆ ಇಂದು ಸಂಜೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ವಿವರ ನೀಡಿದರು.

ಕೋವಿಡ್‌ ಸೋಂಕು ಅಧಿಕವಾಗಿರುವುದರಿಂದ ಕೆಲವು ನಿರ್ಬಂಧಗಳನ್ನು ಮಾಡಲಾಗಿದೆ. ಯಾರಿಗೋ ತುಸು ಲಾಭವಾಗುತ್ತದೆ ಎಂದು ಈ ನಿಯಮಾವಳಿಗಳನ್ನು ಸಡಿಲಿಸಲು ಸಾಧ್ಯವಿಲ್ಲ. ಲಕ್ಷಾಂತರ ಜನರನ್ನು ಕಷ್ಟಕ್ಕೆ ದೂಡಲು ಆಗುವುದಿಲ್ಲ . ಹೋಟೆಲ್ ಮಾಲಿಕರಾಗಲಿ,ಬೇರೆಯವರಿಂದಾಗಲಿ ಬರುವ ಒತ್ತಡಕ್ಕೆ ಮಣಿಯಲು ಸಾಧ್ಯವಿಲ್ಲ . ತಜ್ಞರ ಸಲಹೆಯಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ ರ್ಯಾಲಿ ಕುರಿತು ಮಾತನಾಡಿದ ಅವರು ಬೆಟ್ಟ ಅಗೆದು ಇಲಿ ಹಿಡಿದ್ರು ಎಂಬಂತಿದೆ  ಕಾಂಗ್ರೆಸ್ ನವರ ಮನಸ್ಥಿತಿ. ರ್ಯಾಲಿಯಲ್ಲಿ ಯಾರು ಮೊದಲಿರಬೇಕು

ಆ ನಂತರ ಯಾರು ಹಿಂದಿರಬೇಕು ಎಂಬ ಮನಸ್ಥಿತಿ  ಅವರಲ್ಲಿತ್ತು. ಇದು ಡಿಕೆಶಿ,ಸಿದ್ದರಾಮಯ್ಯ ಮೇಲಾಟದ ಪಾದಯಾತ್ರೆ. ಹಿಂದೆ ಎಸ್.ಎಂ.ಕೃಷ್ಣರು ಪಾದಯಾತ್ರೆ ಮಾಡಿದ್ರು. ಆಗ ಕೋರ್ಟ್ ಛೀಮಾರಿ ಹಾಕಿತ್ತು ಎಂದ ಅವರು  ಮೇಕೆದಾಟು ಪಾದಯಾತ್ರೆಗೆ  ಟಾಂಗ್ ನೀಡಿದರು.

Continue Reading
Advertisement
ರಾಜಕೀಯ9 mins ago

ಮೇಕೆದಾಟು ಪಾದಯಾತ್ರೆ; ಕಾಂಗ್ರೆಸಿಗೆ ವರವೋ ಶಾಪವೋ ?

ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್‌ ಅವರು 2023ರ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟು, ತಮ್ಮ ವೈಯುಕ್ತಿಕ ಕಾರ್ಯಸೂಚಿ  (ಮೇಕೆದಾಟು ಪಾದಯಾತ್ರೆ ಮೇಲ್ನೊಟಕ್ಕೆ ಎಐಸಿಸಿ ಅನುಮೊದಿತವಾಗಿ ಕಂಡ್ರು ಅದು ಕರ್ನಾಟಕ...

ದೇಶ22 mins ago

ಗಣರಾಜ್ಯೋತ್ಸವ.. ನಾರಾಯಣ ಗುರುಗಳಿಗೆ ಅಪಮಾನ.. ಎಸ್ ಡಿ ಪಿ ಐ ಆಗ್ರಹ

ಮಂಗಳೂರು, ಜ ೧೭ (ಯುಎನ್ ಐ) ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ರಾಜ್ಯವಾರು ಸ್ಥಳೀಯ ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರ, ಪ್ರತಿಬಿಂಬಿಸುವ ಸ್ತಬ್ಧ ಚಿತ್ರ ಪ್ರದರ್ಶಿಸಲು ಅವಕಾಶ ನೀಡುವುದು...

ದೇಶ31 mins ago

ದಲಿತ ನಾಯಕ ರೋಹಿತ್ ಮೇಮುಲ ಪ್ರತಿರೋಧದ ಸಂಕೇತ: ರಾಹುಲ್ ಗಾಂಧಿ

ನವದೆಹಲಿ: ಜನೆವರಿ 17 (ಯು.ಎನ್.ಐ.) ದಲಿತ ನಾಯಕ ರೋಹಿತ್ ಮೇಮುಲ ಪ್ರತಿರೋಧದ ನಾಯಕ ಮತ್ತು ಸಂಕೇತ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ವೇಮುಲಾ...

ಕರ್ನಾಟಕ58 mins ago

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು...

ದೇಶ1 hour ago

ಪಂಜಾಬ್ ಚುನಾವಣಾ ದಿನಾಂಕ ಮುಂದೂಡಿಕೆ

ಚಂಡೀಗಢ: ಜನೆವರಿ 17 (ಯು.ಎನ್.ಐ.) ಪಂಜಾಬ್‌ನಲ್ಲಿ ಫೆಬ್ರವರಿ 20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ತಿಳಿಸಿದೆ. ಗುರು ರವಿದಾಸ್ ಜಯಂತಿ ಆಚರಣೆಗೆ ಅನುಕೂಲ...

ದೇಶ1 hour ago

ದೇಶವನ್ನು ಕೊರೋನಾ ಮುಕ್ತಗೊಳಿಸಲು ಪಣ ತೊಡೋಣ; ಕೇಜ್ರಿವಾಲ್

ನವದೆಹಲಿ: ಜನೆವರಿ 17 (ಯು.ಎನ್.ಐ.) ಸಾಂಕ್ರಾಮಿಕ ರೋಗವಾದ ಕೋವಿಡ್ -೧೯ ಪರಿಸ್ಥಿತಿಯನ್ನು ಆಪಾದನೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಪ್ರಯೋಜನವಿಲ್ಲ. ಇಡೀ ದೇಶದಿಂದ ತೊಡೆದುಹಾಕು ಪಣ ತೊಡಬೇಕು ಎಂದು...

ಸಿನೆಮಾ1 hour ago

ಹಿಂದಿಯಲ್ಲಿ ತೆರೆ ಕಾಣುತ್ತಿದೆ ಅಲ್ಲು ಅರ್ಜುನ್‌ ಅಭಿನಯದ ‘ಅಲಾ ವೈಕುಂಠಪುರಮುಲು’

ಹೈದರಾಬಾದ್: ಜನೆವರಿ 17 (ಯು.ಎನ್.ಐ.) ಇದೀಗ ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ದಿ ರೈಸ್ ಸಿನಿಮಾದ ಯಶಸ್ಸಿನಲ್ಲಿದ್ದಾರೆ. ಮತ್ತೊಂದು ಸಂತೋಷದ ವಿಚಾರವೆಂದರೆ ಅಲ್ಲು ಅರ್ಜುನ್‌...

ದೇಶ2 hours ago

ಮೂವರು ಪಿಎಲ್ ಎಫ್ ಐ ಸಂಘಟನೆ ನಕ್ಸಲರ ಬಂಧನ

ಖುಂಟಿ: ಜನೆವರಿ 17 (ಯು.ಎನ್.ಐ.) ನಿಷೇಧಿತ ಪೀಪಲ್ಸ್ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ ಎಫ್‌ಐ) ಸಂಘಟನೆಗೆ ಸೇರಿದ 14 ವರ್ಷದ ಅಪ್ರಾಪ್ತ ಸೇರಿದಂತೆ ಮೂವರು ಮೂವರು...

ದೇಶ2 hours ago

ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ನಿಧನ: ಮೋದಿ ಸಂತಾಪ

ರಾಯಗಡ: ಜನೆವರಿ ೧೭ (ಯು.ಎನ್.ಐ.) ಪದ್ಮಶ್ರೀ ಪುರಸ್ಕೃತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ....

ಕರ್ನಾಟಕ2 hours ago

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ...

ಟ್ರೆಂಡಿಂಗ್

Share