Connect with us


      
ಕರ್ನಾಟಕ

ಸಕಾಲದಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ: ಕೃಷಿ ಸಚಿವ ಬಿ.ಸಿ. ಪಾಟೀಲ್

Lakshmi Vijaya

Published

on

ಬೆಂಗಳೂರು: ಮೇ 13 (ಯು.ಎನ್.ಐ.) ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆ ಪ್ರಾರಂಭವಾಗಿದ್ದು ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದೆ. ಇದನ್ನು ಸಕಾಲದಲ್ಲಿ ರೈತರಿಗೆ ತಲುಪಿಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು.

ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಜರುಗಿದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರ ಉದ್ದೇಶಿಸಿ ಮಾತನಾಡುತ್ತಾ ಅಧಿಕಾರಿಗಳಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳು ಸರಬರಾಜು ಆಗದಂತೆ ಕ್ರಮ ವಹಿಸಲು ಸೂಚಿಸಿದರು .

ಕೃಷಿ ಇಲಾಖೆಯ ಕಾರ್ಯದರ್ಶಿಗಳಾದ  ಶಿವಯೋಗಿ ಕಳಸದ ಅವರು ಕೃಷಿ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ಸರ್ಕಾರದ ಹಂತದಲ್ಲಿ ಅನುದಾನ ಸಕಾಲಕ್ಕೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ರೈತರಿಗೆ ಇಲಾಖೆ ಕಾರ್ಯಕ್ರಮಗಳನ್ನು ತಲುಪಿಸುವ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ವಹಿಸಬೇಕೆಂದು ತಿಳಿಸಿದರು .  ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Share