Connect with us


      




ದೇಶ

ಐಎಎಫ್ ಹೆಲಿಕಾಪ್ಟರ್ ಅಪಘಾತ: ಚಿಕಿತ್ಸೆ ಪಡೆಯುತ್ತಿರುವ ಕ್ಯಾಪ್ಟನ್ ವರುಣ್ ಸಿಂಗ್

Bindushree Hosuru

Published

on

ನವದೆಹಲಿ: ಡಿ, 8 (ಯುಎನ್ಐ) ತಮಿಳುನಾಡಿನ ಕೂನೂರ್‌ನಲ್ಲಿ ಬುಧವಾರ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ಬಲಿತೆಗೆದುಕೊಂಡ ಐಎಎಫ್ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ, ಈ ವರ್ಷದ ಸ್ವಾತಂತ್ರ್ಯ ದಿನದಂದು ಶೌರ್ಯ ಚಕ್ರವನ್ನು ನೀಡಲಾಯಿತು.

ಗಂಭೀರ ಗಾಯಗೊಂಡಿರುವ ಕ್ಯಾಪ್ಟನ್ ವರುಣ್ ಸಿಂಗ್ ಅವರು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಐಎಎಫ್ ಟ್ವೀಟ್‌ನಲ್ಲಿ ತಿಳಿಸಿದೆ.

ಈ ವರ್ಷದ ಆಗಸ್ಟ್ 15 ರಂದು, ಲಘು ಯುದ್ಧ ವಿಮಾನದ (LCA) ಸ್ಕ್ವಾಡ್ರನ್‌ನಲ್ಲಿ ಪೈಲಟ್ ಆಗಿರುವ ವಿಂಗ್ ಕಮಾಂಡರ್ ವರುಣ್ ಸಿಂಗ್ ಅವರಿಗೆ ಭಾರತದ ಮೂರನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಶೌರ್ಯ ಚಕ್ರವನ್ನು ಅವರ ಅಸಾಧಾರಣ ಶೌರ್ಯಕ್ಕಾಗಿ ನೀಡಲಾಯಿತು.

Share