Connect with us


      




ಕರ್ನಾಟಕ

ಜನರಿಲ್ಲದ ಇಂದಿರಾ ಕ್ಯಾಂಟೀನ್ ಗಳು ಶಿಫ್ಟ್ ಆಗಲಿವೆಯಾ?

Lakshmi Vijaya

Published

on

ಬೆಂಗಳೂರು: ಏಪ್ರಿಲ್ 19 (ಯು.ಎನ್.ಐ.)  ಹೆಚ್ಚು ಜನ ಬಾರದ ಇಂದಿರಾ ಕ್ಯಾಂಟೀನ್ ಗಳನ್ನು ಜನನಿಬಿಡ ಜಾಗಗಳಿಗೆ ಸ್ಥಳಾಂತರಿಸಲು ಸಚಿವ ಸಂಪುಟ ಸಭೆ ಚಿಂತಿಸಿದೆ. ಈ ಬಗ್ಗೆ ಸಭೆ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ,  ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳನ್ನು ನಡೆಸಲು ಕಷ್ಟವಾಗುತ್ತಿರುವುದರಿಂದ ಅವುಗಳನ್ನು ಲಾಭದಾಯಕವಾಗಿಸಲು ಚಿಂತಿಸಲಾಗಿದೆ. ಹೀಗಾಗಿ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡುವ ಕುರಿತು 10 ದಿನದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಾಮಿ ತಿಳಿಸಿದ್ದಾರೆ.

 ಹಾಲಿ ಇರುವ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳಿಗೆ ಜನರು ಬಾರದ ಹಿನ್ನೆಲೆಯಲ್ಲಿ ಅವುಗಳನ್ನು ನಡೆಸಲು ಪಾಲಿಕೆಯಿಂದ ಶೇ. 30 ರಷ್ಟು ಹಣ ನೀಡುವುದೂ ಕಷ್ಟವಾಗುತ್ತಿದೆ.  ಸರ್ಕಾರವೇ ಹಣ ನೀಡಬೇಕೆಂದು ಪಾಲಿಕೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.  ಈ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಹೆಚ್ಚು ಜನರಿಗೆ ತಲುಪುವಂತೆ ಮಾಡಲು ಅವುಗಳನ್ನು ಬಸ್‌ನಿಲ್ದಾಣ, ರೈಲ್ವೆ ನಿಲ್ದಾಣದಂತಹ ಜನನಿಬಿಡ ಪ್ರದೇಶಗಳಿಗೆ ಸ್ಥಳಾಂತರಿಸುವ ಬಗ್ಗೆ 10 ದಿನದಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

Share