Connect with us


      
ಕರ್ನಾಟಕ

‘ಕೇಸ್ ಮುಚ್ಚಿಹಾಕಲು ಸರ್ಕಾರ ಪ್ರಯತ್ನ’ – ಸಿದ್ದರಾಮಯ್ಯ ಗಂಭೀರ ಆರೋಪ

Iranna Anchatageri

Published

on

ಸಾಂಧರ್ಭಿಕ ಚಿತ್ರ

ಬೆಂಗಳೂರು: ಏಪ್ರಿಲ್ 15 (ಯು.ಎನ್.ಐ.) ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕುರಿತಂತೆ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದೆ. ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಿನ್ನೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಆದ್ರೆ, ಪ್ರತಿಪಕ್ಷಗಳು ಪ್ರತಿಭಟನೆಯನ್ನೂ ಮಾತ್ರ ನಿಲ್ಲಿಸಿಲ್ಲ.

ಪ್ರತಿಭಟನೆ ತೀವ್ರಗೊಳಿಸುವ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಜಯನಗರದಲ್ಲಿ ಬಿಜೆಪಿ ಕಾರ್ಯಕರಣಿ ಸಭೆ ನಡೆಯುತ್ತಿದೆ. ಅದೇ ವ್ಯಾಪ್ತಿಯಲ್ಲಿ ನಾವು ಹೋರಾಟ ಮಾಡುತ್ತೇವೆ. ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ತಂಡ ಅಲ್ಲಿ ಪ್ರತಿಭಟನೆ ಮಾಡಲಿದೆ. ಸಂತೋಷ್ ಪಾಟೀಲ್ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ಕೊಡಬೇಕು. ಸಂತೋಷ ಪಾಟೀಲ್ ಪತ್ನಿಗೆ ಸರ್ಕಾರಿ ಕೆಲಸ ಕೊಡ್ಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ 11 ಲಕ್ಷ ನೀಡುತ್ತಿದ್ದೇವೆ ಎಂದು ಹೇಳಿದ ಸಿದ್ದರಾಮಯ್ಯ, ಸಂತೋಷ್ ಪಾಟೀಲ್ ಮಾಡಿರುವ ಕೆಲಸ ಕಾಮಗಾರಿ ಬಿಲ್ ಕ್ಲಿಯರ್ ಮಾಡ್ಬೇಕು. ನಾಳೆಯಿಂದ ಐದು ದಿನಗಳು, 9 ತಂಡದ ನೇತೃತ್ವದಲ್ಲಿ ಸರಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಎಲ್ಲ ಜಿಲ್ಲಾ ಕೇಂದ್ರಗಲ್ಲಿ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ. ಕೇಸ್ ಮುಚ್ಚಿ ಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ. ಸಿಎಂ ಬೊಮ್ಮಾಯಿ ಅವರೇ ಅವರ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆಂದು ಸಿದ್ದರಾಮಯ್ಯ ಹೇಳಿದರು.

ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕಾದ್ರೆ ಹಾಲಿ ಹೈಕೋರ್ಟ್ ನ್ಯಾಯಧೀಶರ ಸಮಕ್ಷಮದಲ್ಲಿ ತನಿಖೆಯಾಗಬೇಕು ಎಂದು ಆಗ್ರಹಿಸಿದ ಮಾಜಿ ಸಿಎಂ, ಇಲ್ಲಾಂದ್ರೆ ಈಶ್ವರಪ್ಪ ಸಾಕ್ಷಿ ನಾಶ ಮಾಡ್ತಾರೆ. ಈಶ್ವರಪ್ಪ ಏನು ಸಾಮಾನ್ಯ ವ್ಯಕ್ತಿ ಅಲ್ಲ. ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಭ್ರಷ್ಟಾಚಾರಕ್ಕಾಗಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರದಿಂದ ಕರ್ನಾಟಕ ನಲುಗಿ ಹೋಗಿದೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಗೌಡ ಪಾಟೀಲ್ ದೂರು ಕೊಟ್ಟಿದ್ದಾರೆ. ದೂರಿ‌ನಲ್ಲಿ ಪ್ರಶಾಂತ್ ಪಾಟೀಲ್ ಈಶ್ವರಪ್ಪ ಹೇಳಿದ ಮೇಲೆ ಕೆಲಸ ಮಾಡಿದ್ದಾರೆ ಎಂದು ವಿವರವಾದ ಮಾಹಿತಿ ದೂರಿನಲ್ಲಿ ಹೇಳಿದ್ದಾರೆ. ಅವರ ಪಿಎ ಬಸವರಾಜ್, ರಮೇಶ್ 40ರಷ್ಟು ಕಮಿಷನ್ ಕೇಳಿದ್ದಾರೆ. ಕಮಿಷನ್ ಕೊಡದೇ ಬಿಲ್ ಕಿಯ್ಲರ್ ಮಾಡಲ್ಲ ಎಂದು ಹೇಳಿದ್ದಾರೆ. ಇಷ್ಟೆಲ್ಲ ದೂರಿನಲ್ಲಿ ಹೇಳಿದ್ರೂ ಭ್ರಷ್ಟಾಚಾರ ಕಾಯ್ದೆ ಅಡಿ ಕೇಸ್ ದಾಖಲು ಮಾಡಿಲ್ಲ. ಉದ್ದೇಶಪೂರ್ವಕವಾಗಿ ಭ್ರಷ್ಟಾಚಾರ ಕಾಯ್ದೆ ಅಡಿ ಕೇಸ್ ಹಾಕಿಲ್ಲ. ನನ್ನ ಸಾವಿಗೆ ನೇರವಾದ ಕಾರಣ ಈಶ್ವರಪ್ಪ ಎಂದು ಸಂತೋಷ್ ಪಾಟೀಲ್ ಹೇಳಿದ್ದಾರೆ. ಬಿಲ್ ಕಿಯ್ಲರ್ ಆಗದೇ ಇದ್ರೆ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಪತ್ರದಲ್ಲಿ ಸಂತೋಷ್ ಪಾಟೀಲ್ ಹೇಳಿದ್ದಾರೆ. ಕೂಡಲೇ ಭ್ರಷ್ಟಾಚಾರ ಕಾಯ್ದೆ ಅಡಿ ಕೇಸ್ ಹಾಕ್ಬೇಕು. ಕೂಡಲೇ ಈಶ್ವರಪ್ಪನವರನ್ನ ಬಂಧಿಸಬೇಕು. ಸೆಕ್ಷನ್ 306 ಅಡಿ 10 ವರ್ಷ ಜೈಲು ಶಿಕ್ಷೆ ಇದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Share