Published
2 weeks agoon
ಬೆಂಗಳೂರು: ಆಗಸ್ಟ್ 03 (ಯು.ಎನ್.ಐ.) ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತ ರಿಲೇ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದ ಪ್ರಿಯಾ ಮೋಹನ್, ಭರತ್ ಶ್ರೀಧರ್, ರೂಪಾಲ್ ಚೌಧರಿ ಮತ್ತು ಕಪಿಲ್ ಅವರನ್ನೊಳಗೊಂಡ ಮಿಕ್ಸಡ್ ರಿಲೇ ತಂಡ ಉತ್ತಮ ಪ್ರದರ್ಶನ ತೋರಿಸಿದ್ದು, ಕೂದಲೆಳೆ ಅಂತದರಲ್ಲಿ ಚಿನ್ನದ ಪದಕ ಕೈ ತಪ್ಪಿದೆ.
ಕಳೆದ ವರ್ಷ ಕಂಚಿನ ಪದಕದ ಸಾಧನೆ ಮಾಡಿದ್ದ ಭಾರತದ ರಿಲೇ ತಂಡ ಈ ಬಾರಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದೆ. ಸ್ವಲ್ಪದ್ರಲ್ಲೇ ಚಿನ್ನದ ಪದಕ ಕೈ ತಪ್ಪಿದ್ದು, ಮುಂದಿನ ಸಲ ಚಿನ್ನದ ಪದಕಗೆಲ್ಲುವ ವಿಶ್ವಾಸವಿದ್ದು, ಅತ್ಯುತ್ತಮ ಸಾಧನೆ ಮಾಡಿರುವ ರಿಲೇ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪ್ರಿಯಾ ಮೋಹನ್ ಅವರಿಗೆ 5 ಲಕ್ಷ ನಗದು ಪುರಸ್ಕಾರ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕನ್ನಡಿಗರಿಗೆ ಅಭಿನಂದನೆ
ಬರ್ಮಿಂಗ್ಹ್ಯಾಮ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ!
ರಿಲಯನ್ಸ್ ; ಎರಡು ಹೊಸ ತಂಡಗಳ ಹೆಸರು, ಬ್ರಾಂಡ್ ಗುರುತು ಅನಾವರಣ
ಕಾಮನ್ವೆಲ್ತ್ ಗೇಮ್ಸ್: ಅಶ್ವಿನಿ ಪೊನ್ನಪ್ಪರಿಗೆ ರಾಜ್ಯ ಸರಕಾರದಿಂದ 15 ಲಕ್ಷ ನಗದು ಪುರಸ್ಕಾರ
ಕಾಮನ್ ವೆಲ್ತ್ ಗೇಮ್ಸ್; ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ನಲ್ಲಿ ಭಾರತಕ್ಕೆ ಚಿನ್ನ, ಟೇಬಲ್ ಟೆನ್ನಿಸ್ ನಲ್ಲಿ ಸ್ವರ್ಣದ ಜೊತೆಗೆ ಕಂಚು
ಕಾಮನ್ ವೆಲ್ತ್ ಗೇಮ್ಸ್; ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಲಕ್ಷ್ಯಸೇನ್, ಭಾರತಕ್ಕೆ 20 ಚಿನ್ನ