Connect with us


      




ಕರ್ನಾಟಕ

ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!

Iranna Anchatageri

Published

on

ಬೆಂಗಳೂರು: ಜನೆವರಿ 17 (ಯು.ಎನ್.ಐ) ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದು ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ.

ಒಂದೇ ದಿನದಲ್ಲಿ 287 ಹೊಸ ರೂಪಾಂತರಿ ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಧಾನಿಯಲ್ಲಿ 287 ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲಿ ಒಟ್ಟಾರೆ ಹೊಸ ತಳಿಯ ಕೇಸ್ ಗಳ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

Share