Connect with us


      
ದೇಶ

ಕಟ್ಟಡದಲ್ಲಿ ಭಾರಿ ಸ್ಫೋಟ: 6 ಮಂದಿ ಸಾವು, 12 ಮಂದಿಗೆ ಗಾಯ

Vanitha Jain

Published

on

ಭಾಗಲ್ಪುರ್: ಮಾರ್ಚ್ 04(ಯು.ಎನ್.ಐ.) ಕಟ್ಟಡವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿರುವ ಘಟನೆ ಭಾಗಲ್ಪುರ್ ಜಿಲ್ಲೆಯ ಕಾಜ್ವಾಲಿಚಕ್ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದಿದೆ.

ಭಾರೀ ಸ್ಫೋಟದ ನಂತರ ಮೂರು ಅಂತಸ್ತಿನ ಕಟ್ಟಡವೊಂದು ಕ್ಷಣಾರ್ಧದಲ್ಲಿ ಕುಸಿದು ಬಿದ್ದಿದೆ ಎಂದು ಭಾಗಲ್ಪುರ ವ್ಯಾಪ್ತಿಯ ಉಪ ಮಹಾನಿರೀಕ್ಷಕ (ಡಿಐಜಿ) ಸುಜೀತ್ ಕುಮಾರ್ ತಿಳಿಸಿದ್ದಾರೆ. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎಲ್ಲ ಗಾಯಾಳುಗಳನ್ನು ಭಾಗಲ್ಪುರದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಮಾರ್ ತಿಳಿಸಿದ್ದಾರೆ.

ಘಟನೆಯ ನಂತರ ಜಿಲ್ಲಾಡಳಿತದ ಅಧಿಕಾರಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕುಸಿದ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಒಟ್ಟು ಅವಶೇಷಗಳನ್ನು ತೆರವುಗೊಳಿಸಿದ ನಂತರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದರು.

ಘಟನೆಯಲ್ಲಿ ಸಮೀಪದ ಎರಡು ಕಟ್ಟಡಗಳಿಗೂ ಹಾನಿಯಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಂಡವೂ ಸ್ಥಳಕ್ಕೆ ಆಗಮಿಸಿ ವಿಧಿವಿಜ್ಞಾನ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದೆ ಎಂದು ಹೇಳಿದರು.

ಈ ಕಟ್ಟಡವನ್ನು ಅಕ್ರಮವಾಗಿ ಕಚ್ಚಾ ಬಾಂಬ್ ಗಳ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪಟಾಕಿ ಮತ್ತು ಬಾಂಬ್‌ಗಳನ್ನು ತಯಾರಿಸುವ ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅವರು ಹೇಳಿದರು.

Share