Connect with us


      
ದೇಶ

ಇಡಿ ವಿಚಾರಣೆಗೆ ಮತ್ತೆ ಹೆಚ್ಚಿನ ಸಮಯಾವಕಾಶ ಕೇಳಿದ ಸೋನಿಯಾ ಗಾಂಧಿ

Lakshmi Vijaya

Published

on

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೆಚ್ಚಿನ ಸಮಯವನ್ನು ಕೋರಿದ್ದಾರೆ.

ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಇದೀಗ ಇನ್ನೂ ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆನ್ನಲಾಗಿದೆ.  ಸೋನಿಯಾ  ಗಾಂಧಿಯವರಿಗೆ ಕೋವಿಡ್ ದೃಢಪಟ್ಟ ನಂತರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅವರನ್ನು ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಮಾಡಲಾಗಿದೆ.

ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು.  ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ED) ಹೆಚ್ಚಿನ ಸಮಯವನ್ನು ಕೋರಿದ್ದರು. ಬಳಿಕ

ಜೂನ್ 12 ರಂದು ಉಸಿರಾಟದ ತೊಂದರೆಯಿಂದ  ಅವರನ್ನು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲೀಂದ್ರ ಸೋಂಕಿಗೆ ಚಿಕಿತ್ಸೆ ಪಡೆದ ನಂತರ 2 ದಿನದ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Share