Published
6 months agoon
By
UNI Kannadaಬೆಂಗಳೂರು,ಜ.1(ಯು.ಎನ್.ಐ)ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆಯ ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಯುವ ಪೀಳಿಗೆಯ ಸರ್ವಾಂಗೀಣ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ವಿಶೇಷ ಯುವ ಗ್ರಾಮಸಭೆ ಆಯೋಜಿಸಿದೆ
ಜ. 12 ರಿಂದ ಒಂದು ವಾರಗಳ ಕಾಲ ರಾಜ್ಯಾದ್ಯಾಂತ ಯುವ ಗ್ರಾಮ ಸಭೆ ಪ್ರಯುಕ್ತ ಸಪ್ತಾಹವನ್ನು ಆಚರಣೆ ಮಾಡುತ್ತಿದ್ದು, ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮದ ಯುವಕರು ಮತ್ತು ವಿಶೇಷ ಚೇತನಗಳನ್ನೊಳಗೊಂಡ ವಿಶೇಷ ಯುವ ಗ್ರಾಮ ಸಭೆಯನ್ನು ಜ.12ರಂದು ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ.
ಈ ಯುವ ಸಪ್ತಾಹದಲ್ಲಿ ಚುನಾಯಿತ ಪ್ರತಿನಿಧಿಗಳಾದ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಸದಸ್ಯರು ಕಡ್ಡಾಯವಾಗಿ ಪಾಲ್ಗೊಂಡು ಯುವ ಜನತೆಗೆ ಉತ್ತೇಜನ ನೀಡಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಧನ ಇಲಾಖೆ: 1385 ಅಭ್ಯರ್ಥಿಗಳಿಗೆ ಏಕಕಾಲಕ್ಕೆ ನೇಮಕ ಆದೇಶ
ಮೈಶುಗರ್ ಕಾರ್ಖಾನೆ ಆಗಸ್ಟ್ನಲ್ಲಿ ಪುನಾರಂಭ!
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ
‘ಪ್ರತಿ ಹತ್ಯೆಯಲ್ಲೂ ಬಿಜೆಪಿ ಹೆಣದ ರಾಜಕೀಯ’ – ದಿನೇಶ್ ಗುಂಡೂರಾವ್
ರಾಜಸ್ಥಾನ ಹತ್ಯೆ: ಕಾಂಗ್ರೆಸ್ ಸರಕಾರ ವಜಾಗೊಳಿಸಲು ಕಟೀಲ್ ಆಗ್ರಹ
ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: ಹತ್ಯೆ ಖಂಡಿಸಿದ ಎಚ್ಡಿಕೆ