Published
6 months agoon
By
UNI Kannadaಬೆಂಗಳೂರು: ಫೆಬ್ರವರಿ 09 (ಯು.ಎನ್.ಐ.) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಜೆಟ್ ಸಭೆ ಹಿನ್ನೆಲೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದ ಹಲವು ಸಂಘ ಸಂಸ್ಥೆಗಳ ಜೊತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಇಂದು ಪೂರ್ವಭಾವಿ ಸಭೆ ನಡೆಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಉತ್ತಮ ಶಕ್ತಿ ತುಂಬಬೇಕು ಎಂಬ ಇಚ್ಚೆಯಿಂದ ಇಂದು ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಕ್ರೀಡಾ ಸಬಲೀಕರಣ ಇಲಾಖೆಯಲ್ಲಿ ಕೈಗೊಳ್ಳಬೇಕಾದ ಹೊಸ ಕಾರ್ಯಕ್ರಮಗಳು, ರೂಪಿಸಬೇಕಾದ ಯೋಜನೆಗಳು, ಕ್ರೀಡೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಅಭಿಪ್ರಾಯಗಳನ್ನು ಸ್ವೀಕರಿಸಿದ ಸಚಿವ ನಾರಾಯಣ ಗೌಡ.
ಸಚಿವ ಡಾ.ನಾರಾಯಣಗೌಡರವರ ಕಾರ್ಯಕ್ಕೆ ಮೆಚ್ಚುಗೆ:
ಬಜೆಟ್ ಹಿನ್ನೆಲೆಯಲ್ಲಿ ಸಲಹೆ, ಅಭಿಪ್ರಾಯ ಕೇಳಲು ಸಭೆ ಕರೆದಿರುವುದಕ್ಕೆ ಯುವ ಮತ್ತು ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಮೊದಲ ಬಾರಿಗೆ ಸಚಿವರೊಬ್ಬರು ಈ ರೀತಿಯ ಸಲಹೆ, ಅಭಿಪ್ರಾಯ ಕೇಳುತ್ತಿರುವುದು ಸಂತಸವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಇದರ ಜೊತೆಗೆ ಕಡಿಮೆ ಬಜೆಟ್ನಲ್ಲೂ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಲಾಗುತ್ತಿದೆ. ನಾಲ್ಕು ವರ್ಷದಿಂದ ಸ್ಥಗಿತಗೊಂಡಿದ್ದ ಜಕ್ಕೂರು ವೈಮಾನಿಕ ತರಬೇತ ಶಾಲೆಯನ್ನು ಆರಂಭ, ಸಿದ್ದಿ ಮಕ್ಕಳಿಗೆ ತರಬೇತಿ ನೀಡುತ್ತಿರುವುದು, ಅಮೃತ ಕ್ರೀಡಾ ದತ್ತು ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸುವ ಇಲಾಖೆಗೆ ಜೀವ ತುಂಬಲಾಗಿದೆ. ಈ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಮತ್ತಷ್ಟು ಶಕ್ತಿ ತುಂಬಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹೆಚ್ಚಿನ ಶಕ್ತಿ ತುಂಬಲು ಪಣ: ಸಚಿವ ಡಾ.ನಾರಾಯಣಗೌಡ
ಯುವ ಸಂಘಟನೆಗಳು, ಕ್ರೀಡಾ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಇವತ್ತಿನ ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ತಿಳಿಸಿ, ಹಲವು ಸಲಹೆಗಳನ್ನು ನೀಡಿದ್ದಾರೆ. ಇದರ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಮಗ್ರವಾಗಿ ಚರ್ಚಿಸಿ, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ನಾನು ಸಚಿವನಾದ ಮೇಲೆ ಇಲಾಖೆಯಲ್ಲಿ ಹಲವು ಹೊಸ ಹೊಸ ಯೋಜನೆಗಳನ್ನು ರೂಪಿಸಿ, ಇಲಾಖೆಯಲ್ಲಿ ಹೊಸತನ ಮೂಡಿಸಲಾಗುತ್ತಿದೆ. ಮುಂದಿನ ಬಜೆಟ್ನಲ್ಲೂ ಉತ್ತಮ ಯೋಜನೆಗಳನ್ನ ರೂಪಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಈ ಬಾರಿಯ ಬಜೆಟ್ನಲ್ಲಿ ಕ್ರೀಡಾ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ತಿಳಿಸಿದರು.
ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಬಜೆಟ್ ಪೂರ್ವಭಾವಿ ಸಭೆಯಲ್ಲಿ ಯುವ ಸಬಲೀಕರಣ ಇಲಾಖೆಗೆ ಸಂಬಂಧಿಸಿದಂತೆ ಬಂದ ಹಲವು ಸಲಹೆಗಳ ವಿವರ:
1.ಕರ್ನಾಟಕ ಯುವ ಪ್ರಾಧಿಕಾರ ರಚನೆಗೆ ಒತ್ತಾಯಿಸಿದ ಯುವ ಸಂಘ ಸಂಸ್ಥೆಗಳ ಪದಾಧಿಕಾರಿಗಳು
3.ರಾಜ್ಯದ ಪ್ರತಿ ಗ್ರಾಮದಲ್ಲಿ ಯುವ ಸಂಘಗಳ ಸ್ಥಾಪನೆ ಹಾಗೂ ಸರ್ಕಾರದ ಸಹಯೋಗ.
7.ಯುವ ಆರೋಗ್ಯ ಕಾರ್ಡ್.
8.ಯುವ ಕರ್ನಾಟಕ ಪತ್ರಿಕೆ ಪುನಾರಂಭಿಸಬೇಕು.
ಕ್ರೀಡಾ ಇಲಾಖೆಗೆ ಸಂಬಂಧಿಸಿದ ಸಲಹೆಗಳು
2.ಸೈಕ್ಲಿಂಗ್ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಬೇಕು
3.ಜಿಲ್ಲೆಗಳಲ್ಲಿ ಪ್ರತ್ಯೇಕ ಕಿವುಡಾ ಕ್ರೀಡಾ ವಸತಿ ನಿಲಯ ಪ್ರಾರಂಭಿಸಬೇಕು.
5.ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧಿಗಳಿಗೆ ವಿಮೆ ಮಾಡಿಸಬೇಕು.
7.ಸರ್ಕಾರದ ಎಲ್ಲಾ ಇಲಾಖೆ/ನಿಯಮಗಳಲ್ಲಿ ಕ್ರೀಡಾ ಪಟುಗಳಿಗೆ 2% ಉದ್ಯೋಗ.
8.ವಿಕಲಚೇತನರಿಗೆ ಪ್ರತ್ಯೇಕ ವಸತಿ ನಿಲಯ ಪ್ರಾರಂಭಿಸಬೇಕ.
ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಿದ ಡಾ. ರಾಜ್ ಕುಟುಂಬ
ಸ್ವಾತಂತ್ರ್ಯೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದ; ಓರ್ವನಿಗೆ ಚಾಕು ಇರಿತ
ಸಂಗೊಳ್ಳಿ ರಾಯಣ್ಣನ ದೇಶಭಕ್ತಿ, ಧೈರ್ಯ ಎಲ್ಲಾ ಯುವಜನರಿಗೂ ಬರಬೇಕು: ಸಿಎಂ
ಕಾಂಗ್ರೆಸ್ #FreedomMarch: ಇಂದಿನ ಬೃಹತ್ ನಡಿಗೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹೆಜ್ಜೆ!
ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ : ಸಿದ್ದರಾಮಯ್ಯ
ಕೆಯುಡಬ್ಲ್ಯೂಜೆ ಮನೆಯಂಗಳದಲ್ಲಿ ಗೌರವ ಕಾರ್ಯಕ್ರಮ..