Connect with us


      




ಕರ್ನಾಟಕ

ಕೋವಿಡ್ ಸಂಕಷ್ಟದ ನಡುವೆಯೂ ಬ್ಯಾಂಕ್ ಲಾಭ !

Iranna Anchatageri

Published

on

ಬೆಂಗಳೂರು, ಡಿಸೆಂಬರ್ 12 (ಯು.ಎನ್.ಐ.) ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕೆಂಬ ಉದ್ದೇಶದಿಂದ ಪ್ರಾರಂಭವಾಗಿರುವ ಬಸವನಗುಡಿಯ ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ಲಿ, ಕೋವಿಡ್ ಸಾಂಕ್ರಾಮಿಕ ಸಂಕಷ್ಟದ ನಡುವೆಯೂ 2021ರ ಮಾರ್ಚ್ 3ರ ಅಂತ್ಯಕ್ಕೆ 1.37 ಕೋಟಿಗೂ ಅಧಿಕ ನಿವ್ವಳ ಲಾಭ ಗಳಿಸಿದೆ.
ಶ್ರೀ ಚರಣ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕಿನ 25 ನೇ ವಾರ್ಷಿಕ ಸರ್ವ ಸದಸ್ಯರ ವರ್ಚುಯಲ್ ಸಭೆಯಲ್ಲಿ ಈ ವಿಷಯ ತಿಳಿಸಿದ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ದ್ವಾರಕಾನಾಥ್, “2020-21ರಲ್ಲಿ ಬ್ಯಾಂಕ್‍ಗೆ ಒಟ್ಟಾರೆ 7 ಕೋಟಿ ರೂ. ಲಾಭ ಬಂದಿದೆ. ಈ ಪೈಕಿ ನಿವ್ವಳ ಲಾಭ ಗಳಿಕೆಯಾಗಿರುವುದು 1.37 ಕೋಟಿ ರೂ. ಗಳಿಗೂ (1,37,96,051) ಅಧಿಕ. ಕೋವಿಡ್ ಸೋಂಕು ಕಾಣಿಸಿಕೊಳ್ಳದಿದ್ದರೆ, ಮತ್ತಷ್ಟು ಲಾಭ ಬರುತ್ತಿತ್ತು. ಆದರೂ, ಕೊವಿಡ್ ನಡುವೆಯೂ ಉತ್ತಮ ವಹಿವಾಟಿನೊಂದಿಗೆ ಇಷ್ಟು ಪ್ರಮಾಣದಲ್ಲಿ ಲಾಭ ಗಳಿಕೆ ಮಾಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ,” ಎಂದರು.
“2021ನೇ ಸಾಲಿನಲ್ಲಿಯೇ ಬ್ಯಾಂಕಿನ ರಜತ ಮಹೋತ್ಸವ (25ನೇ ವಾರ್ಷಿಕೋತ್ಸವ) ಆಚರಿಸಬೇಕಿತ್ತು. ಆದರೆ, ಕೋವಿಡ್‍ನಿಂದಾಗಿ ಆಚರಿಸಲಾಗಲಿಲ್ಲ. ಹೀಗಾಗಿ, 2022ರಲ್ಲಿ ರಜತ ಮಹೋತ್ಸವ ಆಚರಿಸಿ, ನಮ್ಮ ಬ್ಯಾಂಕಿನ ಲಾಭಾಂಶವನ್ನು ಆಧರಿಸಿ ಎಲ್ಲಾ ಸದಸ್ಯರಿಗೆ ಡಿವಿಡೆಂಟ್ ನೀಡಲಾಗುವುದು,” ಎಂದು ಘೋಷಿಸಿದರು.
ಸಭೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಕೆ.ರಾಮಮೂರ್ತಿ ಹಾಗೂ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.

Share