Connect with us


      
ಸಿನೆಮಾ

ರಾಜ್ಯ ಚಲನಚಿತ್ರ ಪ್ರಶಸ್ತಿ: ಹಿರಿಯ ನಟಿ ಲಕ್ಷ್ಮಿ ಅವರಿಗೆ ಡಾ.ರಾಜಕುಮಾರ್ ಪ್ರಶಸ್ತಿ

Iranna Anchatageri

Published

on

ಬೆಂಗಳೂರು: ಏಪ್ರಿಲ್ 24 (ಯು.ಎನ್.ಐ.) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಹಾಗೂ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದರು.

ಹಿರಿಯ ಚಿತ್ರನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜಕುಮಾರ ಪ್ರಶಸ್ತಿ, ಖ್ಯಾತ ನಿರ್ದೇಶಕ ಎಸ್ ನಾರಾಯಣ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪ್ರದಾನ ಮಾಡಿದರು. ವಿಷ್ಣು ವರ್ಧನ ಪ್ರಶಸ್ತಿ ದಿ. ಜಿ ಎಂ ಲಕ್ಷ್ಮೀಪತಿ ಅವರಿಗೆ ಘೋಷಿಸಲಾಯಿತು. ಪ್ರಶಸ್ತಿಯನ್ನು ಲಕ್ಷ್ಮೀಪತಿ ಅವರ ಪರವಾಗಿ ಅವರ ಪುತ್ರ ರಾಮ್ ಪ್ರಸಾದ ಅವರು ಸ್ವೀಕರಿಸಿದರು.

ಇನ್ನುಳಿದಂತೆ 2017ನೇ ಸಾಲಿನ ಕನ್ನಡ ಚಲನಚಿತ್ರ ಪ್ರಶಸ್ತಿಗಳನ್ನು ಮುಖ್ಯಮಂತ್ರಿಗಳು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಾಘವೇಂದ್ರ ರಾಜಕುಮಾರ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಮ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಆಯುಕ್ತ ಡಾ. ಪಿ ಎಸ್ ಹರ್ಷ, ಚಿನ್ನೇಗೌಡ ಮತ್ತು ಇತರರು ಉಪಸ್ಥಿತರಿದ್ದರು.

Share