Published
7 months agoon
By
prathamಬೆಂಗಳೂರು, ಅ, 29: ಗ್ರಾಮ ಪಂಚಾಯತಿಗಳಿಂದ ಮೇಲ್ದರ್ಜೆಗೇರಿಸಲಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಿಗದಿಪಡಿಸಲಾಗಿರುವ ಅನುದಾನವನ್ನು ಹಂಚಿಕೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ ನೀಡಿದ್ದಾರೆ.
ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜು ಅವರ ಮನವಿ ಮೇರೆಗೆ ವಿಧಾನಸೌಧದಲ್ಲಿಂದು ಸಚಿವ ಕೆ.ಎಸ್. ಈಶ್ವರಪ್ಪ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಕಳೆದ ಸಾಲಿನಲ್ಲಿ ೨೩ ಗ್ರಾಮ ಪಂಚಾಯತಿಗಳನ್ನು ೨೦ ಪಟ್ಟಣ ಪಂಚಾಯತಿಗಳು, ೨ ಪುರಸಭೆ ಮತ್ತು ೧ ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಅವುಗಳು ಅನುದಾನ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದವು.
ಗ್ರಾಮ ಪಂಚಾಯತಿಗಳಾಗಿದ್ದ ಸಂದರ್ಭದಲ್ಲಿ ಸಂಗ್ರಹಿಸಲಾಗಿದ್ದ ತೆರಿಗೆ ಹಣ, ೧೪ ಮತ್ತು ೧೫ನೇ ಹಣಕಾಸು ಆಯೋಗವು ಗ್ರಾಮ ಪಂಚಾಯತಿಗಳಿಗೆ ಬಿಡುಗಡೆ ಮಾಡಿರುವ ೧ ಮತ್ತು ೨ನೇ ಕಂತಿನ ಹಣ ಸೇರಿದಂತೆ ಆಯವ್ಯಯದಲ್ಲಿ ಹಂಚಿಕೆ ಮಾಡಿರುವ ಅನುದಾನವನ್ನೂ ಮೇಲ್ದರ್ಜೆಗೇರಿಸಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಕೂಡಲೇ ವರ್ಗಾಯಿಸಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವಂತೆ ಸಚಿವ ಈಶ್ವರಪ್ಪ ಸೂಚನೆ ನೀಡಿದರು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಆಯುಕ್ತೆ ಶಿಲ್ಪಾನಾಗ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕಿ ಅರ್ಚನಾ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು
ಪಶುವೈದ್ಯರಿಗೂ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಿ: ರಾಜ್ಯ ಪಶುವೈದ್ಯಕೀಯ ಸಂಘ ಒತ್ತಾಯ
ನಗರದಲ್ಲಿ ಎಲ್ಲೆಡೆ ಕಳಪೆ ಕಾಮಗಾರಿ: ಎಚ್.ಡಿ.ಕುಮಾರಸ್ವಾಮಿ
ಪರಿಷತ್ ಟಿಕೆಟ್ ಹಂಚಿಕೆ: ಕಾಂಗ್ರೆಸ್ನಿಂದ ಒಮ್ಮತದ ಅಭ್ಯರ್ಥಿಗಳು ಶಿಫಾರಸು-ಡಿಕೆಶಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಈಶ್ವರಪ್ಪ ಪ್ರತಿಕ್ರಿಯೆ
ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ
ಎಫ್ಡಿಐ ಹೂಡಿಕೆಯಲ್ಲಿ ರಾಜ್ಯಕ್ಕೆ ಸಿಂಹಪಾಲು: ಸಿಎಂ