Connect with us


      




ಕ್ರೀಡೆ

ಮೇ 16ರಿಂದ ರಾಜ್ಯ ಮಿನಿ ಒಲಿಂಪಿಕ್

Iranna Anchatageri

Published

on

ಬೆಂಗಳೂರು: ಮೇ 11 (ಯು.ಎನ್.ಐ.) ಮೇ 16 ರಿಂದ 22ರವರೆಗೆ ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ರಾಜ್ಯ ಮಿನಿ ಒಲಿಂಪಿಕ್ ಕ್ರೀಡಾಕೂಟ ಆಯೋಜನೆಗೊಂಡಿದೆ. ಈ ಕುರಿತು  ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್, ಮೇ 16 ರಂದು ಸಂಜೆ ರಾಜ್ಯಪಾಲ ಗೆಹ್ಲೋಟ್ ಮತ್ತು ಸಿಎಂ ಬೊಮ್ಮಾಯಿ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರದಿಂದ ಎರಡೂವರೆ ಕೋಟಿ ರೂ. ಬಿಡುಗಡೆಯಾಗಿದೆ. 21 ಕ್ರೀಡಾ ಸ್ಫರ್ಧೆಗಳು ಇರಲಿವೆ. 14 ವಯಸ್ಸಿನೊಳಗಿನ ಒಟ್ಟು 5 ಸಾವಿರ ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ. ಮಿನಿ ಒಲಿಂಪಿಕ್ ಕ್ರೀಡಾಕೂಟ ಆಯೋಜನೆಯಾಗುತ್ತಿರುವುದು ಇದು  ಎರಡನೇ ಬಾರಿ ಎಂದು ಗೋವಿಂದರಾಜ್ ಹೇಳಿದರು.

ಅಥ್ಲೆಟಿಕ್ಸ್, ಅರ್ಚರಿ, ಬ್ಯಾಟ್ ಮಿಂಟನ್, ಬಾಸ್ಕೆಟ್ ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಫುಟ್ಭಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ ಬಾಲ್, ಹಾಕಿ, ಜೂಡೋ, ಖೋಖೋ, ಲಾನ್ ಟೆನ್ನಿಸ್, ನೆಟ್ ಬಾಲ್, ರೈಫಲ್ ಶೂಟಿಂಗ್, ಸ್ವಿಮ್ಮಿಂಗ್, ಟೇಬಲ್ ಟೆನ್ನಿಸ್, ಟೇಕ್ವಾಂಡೋ, ವೇಟ್ ಲಿಫ್ಟಿಂಗ್ ಸ್ಫರ್ಧೆಗಳು ಇರಲಿವೆ.

Share