Published
4 months agoon
By
UNI Kannadaನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ ಜಯಂತಿಯನ್ನು ಆಚರಿಸಲಾಗುತ್ತಿದೆ.
ಸ್ವಾತಂತ್ರ್ಯ ಸೇನಾನಿ ಗೆ ಗೌರವ ಸಲ್ಲಿಸುವ ಉದ್ದೇಶದಿಂದ ದೆಹಲಿಯ ಇಂಡಿಯಾ ಗೇಟ್ ಬಳಿ ಇಂದು ಸಂಜೆ ೬ ಗಂಟೆಗೆ ಸುಭಾಷ್ ಚಂದ್ರ ಬೋಸ್ ಅವರ ಹಾಲೋಗ್ರಾಂ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ.
ಈ ಜಾಗದಲ್ಲಿ ನೇತಾಜಿಯವರ ೨೮ ಅಡಿ ಎತ್ತರ ಮತ್ತು ೬ ಅಡಿ ಅಗಲದ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಪ್ರತಿಮೆ ಸ್ಥಾಪನೆಯಾಗುವವರೆಗೆ ಹಾಲೋಗ್ರಾಂ ಪ್ರತಿಮೆ ಇಲ್ಲಿ ನೇತಾಜಿಯವರ ಸಾಧನೆಯನ್ನು ಬಿಂಬಿಸಲಿದೆ.ರೆ.
ಇದೇ ವೇಳೆ ೨೦೧೯, ೨೦೨೦ ಮತ್ತು ೨೦೨೧ನೇ ಸಾಲಿನ ಸುಭಾಷ್ ಚಂದ್ರ ಬೋಸ್ ಆಪ್ದಾ ಪ್ರಬಂಧನ್ ಪುರಸ್ಕಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಪ್ರದಾನ ಮಾಡಲಿದ್ದಾರೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ಆಜಾದ್ ಹಿಂದ್ ಫೌಜ್ ಸೇನೆಯನ್ನು ಮತ್ತೆ ಬಲಗೊಳಿಸುವ ಮೂಲಕ ದೇಶದ ಯುವಕರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದರು.
**
ಸುಭಾಷ ಚಂದ್ರ ಬೋಸ್ ಜನ್ಮಜಯಂತಿಯಂದು ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ನೇತಾಜಿಯವರಿಗೆ ಗೌರವ ಸಲ್ಲಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ ನೇ ಜನ್ಮದಿನದಂದು ದೇಶವು ಕೃತಜ್ಞತೆಯಿಂದ ಗೌರವ ಸಲ್ಲಿಸುತ್ತದೆ. ಆಜಾದ್ ಹಿಂದ್- ಮುಕ್ತ ಭಾರತದ ಕಲ್ಪನೆಯ ಬದ್ಧತೆ ಪೂರೈಸಲು ತೆಗೆದುಕೊಂಡ ಧೈರ್ಯದ ಹೆಜ್ಜೆಗಳು ಅವರನ್ನು ರಾಷ್ಟ್ರೀಯ ಐಕಾನ್ ಆಗಿ ರೂಪಿಸಿತು. ಅವರ ಆದರ್ಶ, ತ್ಯಾಗ ಪ್ರತಿಯೊಬ್ಬ ಭಾರತೀಯರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತವೆ ಎಂದಿದ್ದಾರೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಮಹಾನ್ ರಾಷ್ಟ್ರೀಯವಾದಿ, ಸ್ವಾತಂತ್ರ್ಯ ಹೋರಾಟಗಾರ ಮತ್ತು ದೂರದೃಷ್ಟಿಯ ನಾಯಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು. ನೇತಾಜಿಯವರ ಅದಮ್ಯ ಧೈರ್ಯ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಸೇವೆಯನ್ನು ಗೌರವಿಸಲು ನಾವು ಈ ದಿನವನ್ನು ಪರಾಕ್ರಮ್ ದಿವಸ್ ಎಂದು ಸ್ಮರಿಸಿಕೊಳ್ಳುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ಅವರಿಗೆ ನಮನಗಳು. ರಾಷ್ಟ್ರಕ್ಕೆ ಅವರು ನೀಡಿದ ಕೊಡುಗೆಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ ಎಂದು ಹೇಳಿದ್ದಾರೆ.
“ನೆಹರೂ ಅವರು ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು”
ಯುಪಿ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು: ಧನಸಹಾಯ ಘೋಷಿಸಿದ ಮೋದಿ
ನಮಗೆ ಯಾವಾಗಲೂ ಜನರು ಮೊದಲು: ಪೆಟ್ರೋಲ್ ಬೆಲೆ ಇಳಿಸಿದ ಬಳಿಕ ಪ್ರಧಾನಿ ಮೋದಿ ಹೇಳಿಕೆ
ಜನಸಾಮಾನ್ಯರಿಗೆ ಗುಡ್ ನ್ಯೂಸ್; ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!
ಜ್ಞಾನವಾಪಿ ಮಸೀದಿಯ ಶಿವಲಿಂಗದ ಬಗ್ಗೆ ಪೋಸ್ಟ್ ಹಾಕಿದ್ದ ಪ್ರಾಧ್ಯಾಪಕರಿಗೆ ಜಾಮೀನು ಮಂಜೂರು
ಅಕ್ರಮ ಫ್ಲಾಟ್ ನಿರ್ಮಾಣ: ನೋಟಿಸ್ ಜಾರಿ ಮಾಡಿದ ಬಿಎಂಸಿ