Published
5 months agoon
ಬೆಳಗಾವಿ, ಡಿಸೆಂಬರ್ 13 (ಯು.ಎನ್.ಐ) ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೊಳಿಸುವುದು ಶತಸಿದ್ಧ ಅಂತಾ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮರ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯ ಸುವರ್ಣಸಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್ ಕುಮಾರ್, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸ್ವಾಮಿವಿವೇಕಾನಂದರೂ ಬಲವಂತದ ಮತಾಂತರವನ್ನು ವಿರೋಧಿಸಿದ್ದರು. ಬೆಳಗಾವಿ ಅಧಿವೇಶನದಲ್ಲಿ ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮತಾಂತರ ನಿಷೇಧ ಕಾನೂನು ಜಾರಿ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂಬುದನ್ನು ಒತ್ತಿಹೇಳಿದ ಸುನೀಲ್ ಕುಮಾರ್, ಈ ಕಾಯಿದೆಯನ್ನು ಕಾಂಗ್ರೆಸ್ ಏಕೆ ವಿರೋಧ ಮಾಡುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಯಾವ ಯಾವ ಕಾರಣಗಳಿಗೆ ಮತಾಂತರ ಆಗುತ್ತಿದೆ? ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ವಿಪಕ್ಷಗಳು ಚರ್ಚೆಗೆ ಬರಲಿ.. ತಕ್ಕ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಸವಾಲೆಸೆದರು. ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನೂ ತರುತ್ತೇವೆ ಎಂದು ಇದೇ ವೇಳೆ ಸುನೀಲ್ ಕುಮಾರ್ ತಿಳಿಸಿದರು.
ಬಿಡಿಎ ಬಡಾವಣೆ ಮನೆಗಳ ಸಕ್ರಮಕ್ಕೆ ನಿರ್ಧಾರ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್
ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ
ಡೆಂಘೀ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ
ಶಾಲಾ ಮಕ್ಕಳೊಂದಿಗೆ ಸಿಎಂ ಸಂವಾದ; ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ ಬೊಮ್ಮಾಯಿ
ಎಂಬಿಎ ಪದವೀಧರೆಯಾಗಿದ್ರೂ ಕೆಲಸ ಸಿಗದೆ ಉಡುಪಿಯ ಸಹನಾ ಸಾವು; ಡಿಕೆಶಿ ಸಂತಾಪ
ರಾಷ್ಟ್ರಗೀತೆ ಹಾಡೋದನ್ನು ಮುತಾಲಿಕ್ ಹೇಳಿ ಕೊಡಬೇಕಾ? – ಜಮೀರ್