Published
7 months agoon
By
Vanitha Jainಬೆಂಗಳೂರು: ಜನವರಿ 12( ಯು.ಎನ್.ಐ.) ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸ್ವಾಮಿ ವಿವೇಕಾನಂದರು ಜಗತ್ತಿಗೇ ತೋರಿಸಿಕೊಟ್ಟವರು ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರು ಅಭಿಪ್ರಾಯ ಪಟ್ಟರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಅಮೆರಿಕ, ರಷ್ಯಾ ಮತ್ತಿತರ ಶ್ರೀಮಂತ ದೇಶಗಳು ಸೇರಿದಂತೆ ಎಲ್ಲಾ ರಾಷ್ಟ್ರಗಳು ನಮ್ಮ ಸಂಸ್ಕøತಿ ಮತ್ತು ಆಧ್ಯಾತ್ಮಿಕ ಹಿನ್ನೆಲೆಯಲ್ಲಿ ಭಾರತಕ್ಕೆ ವಿಶೇಷ ಗೌರವ ನೀಡುತ್ತವೆ ಎಂದು ತಿಳಿಸಿದರು.
ಸ್ವಾಮಿ ವಿವೇಕಾನಂದರು ಯುವಶಕ್ತಿಯ ಕುರಿತು ಅಪಾರ ವಿಶ್ವಾಸವನ್ನು ಹೊಂದಿದ್ದರು ಎಂದ ಅವರು, ಜಾಗತಿಕ ಮಟ್ಟದಲ್ಲಿ ಭಾರತವನ್ನು ವಿಶ್ವಗುರುವಾಗಿ ಮಾಡಲು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರಎಮ್.ಜಿ. ಮಹೇಶ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು, ಚಲನಚಿತ್ರ ನಟಿ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರುತಿ, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವಿಡಿಯೋ; ಆರ್ಪಿಎಫ್ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಯಿಂದ ಉಳಿಯಿತು ಜೀವ!
ಹ್ಯಾಪಿಯೆಸ್ಟ್ ಹೆಲ್ತ್ ಆರಂಭ
ಹಣಮಂತ ನಿರಾಣಿಗೆ ಶುಭಾಶಯ ತಿಳಿಸಿದ ಮುರುಗೇಶ್ ನಿರಾಣಿ
ಸಚಿವ ಉಮೇಶ ಕತ್ತಿ ಹೇಳಿಕೆ ಕಟುವಾಗಿ ಖಂಡಿಸಿದ ಕನ್ನಡ ಸಾಹಿತ್ಯ ಪರಿಷತ್ತು
ಜುಲೈ ೧ ರಿಂದ ಕಬ್ಬನ್ ಪಾರ್ಕಿನಲ್ಲಿ ಶ್ವಾನ ಪ್ರವೇಶ ನಿಷೇಧ
ಕೊಮ್ಮಘಟ್ಟದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮ ಹೀಗಿದೆ!