Connect with us


      
ದೇಶ

ವಿವಾಹ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಯಾದವ್

Vanitha Jain

Published

on

ನವದೆಹಲಿ, ಡಿಸೆಂಬರ್ 09 (ಯು.ಎನ್.ಐ) ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಎರಡನೇ ಪುತ್ರ ತೇಜಸ್ವಿ ಯಾದವ್ ನವದೆಹಲಿಯಲ್ಲಿ ಇಂದು ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ.

ವರದಿಗಳ ಪ್ರಕಾರ, ತೇಜಸ್ವಿ ಯಾದವ್ ಹರಿಯಾಣ ಮೂಲದ ತಮ್ಮ ಬಾಲ್ಯದ ಗೆಳತಿ ರಾಜಶ್ರೀ, ಎಕೆಎ ರೇಚೆಲ್ ಅವರನ್ನು ವಿವಾಹವಾಗಿದ್ದಾರೆ. ರಾಜಶ್ರೀ ಮತ್ತು ತೇಜಸ್ವಿ ದೆಹಲಿಯ ಆರ್‍ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್‍ನಲ್ಲಿ ಒಂದೇ ತರಗತಿಯಲ್ಲಿ ಓದುತ್ತಿದ್ದರು ಮತ್ತು ಈಗ 6-7 ವರ್ಷಗಳಿಂದ ಸ್ನೇಹಿತರಾಗಿದ್ದರು ಎಂದು ತಿಳಿದು ಬಂದಿದೆ.

ಗುರುವಾರ ಬೆಳಿಗ್ಗೆಯೇ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಮದುವೆ ವಿಚಾರದಲ್ಲಿ ಗೌಪ್ಯತೆ ಕಾಪಾಡಿಕೊಂಡಿತ್ತು. ಆದರೆ ರಾಜಶ್ರೀ ಸಹೋದರಿ ರೋಹಿಣಿ ಆಚಾರ್ಯ ತಮ್ಮ ಟ್ವಿಟರ್‍ನಲ್ಲಿ ವಿವಾಹದ ಫೋಟೋ ಹಂಚಿಕೊಂಡು ಶುಭಾಶಯ ಕೋರಿದಾಗ ಬಹಿರಂಗವಾಗಿದೆ. ನಾನು ನಿನ್ನ ಮದುವೆಯಲ್ಲಿ ಇಲ್ಲ. ಆದರೆ ನನ್ನ ಆಶೀರ್ವಾದ ನಿಮ್ಮಿಬ್ಬರ ಮೇಲಿದೆ. ಟುಟು ಮತ್ತು ರಾಚೆಲ್‍ಗೆ ಮದುವೆಯ ಶುಭಾಶಯಗಳು ನಿಮ್ಮಿಬ್ಬರ ಜೀವನ ಉಸಿರಿರುವವರೆಗೂ ಸಂತೋಷವಾಗಿರಲೆಂದು ಆಶಿಸುತ್ತೇನೆ ಎಂದು ಟ್ವಿಟರ್‍ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್, ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಜೊತೆ ಎಸ್‍ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮದುವೆಯಲ್ಲಿ ಭಾಗಿಯಾಗಿದ್ದಾರೆ.

Share