Connect with us


      
ದೇಶ

ಭಯೋತ್ಪಾದಕರ ಗುಂಡಿನ ದಾಳಿಗೆ ಇಬ್ಬರು ಪೊಲೀಸರು ಬಲಿ

Vanitha Jain

Published

on

ಶ್ರೀನಗರ, ಡಿಸೆಂಬರ್ 10(ಯು.ಎನ್.ಐ) ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ ಪ್ರದೇಶದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಪೊಲೀಸರು ಹತ್ಯೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಡಿಪೋರಾದ ಗುಲ್ಶನ್ ಚೌಕ್‍ನಲ್ಲಿ ಈ ಘಟನೆ ನಡೆದಿದ್ದು, ಭದ್ರತಾ ಪಡೆಗಳು ಈಗಾಗಲೇ ಭಯೋತ್ಪಾದಕರ ಸೆರೆಗಾಗಿ ಪ್ರದೇಶವನ್ನು ಸುತ್ತುವರೆದಿವೆ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅವರು ಹೇಳಿದರು.

ದಾಳಿಯಲ್ಲಿ ಗಾಯಗೊಂಡಿದ್ದ ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

“ಬಂಡಿಪೋರಾದ ಗುಲ್ಶನ್ ಚೌಕ್ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಈ ಭಯೋತ್ಪಾದಕ ಘಟನೆಯಲ್ಲಿ, ಇಬ್ಬರು ಪೊಲೀಸ್ ಸಿಬ್ಬಂದಿಗಳಾದ ಎಸ್‍ಜಿಸಿಟಿ ಮೊಹಮ್ಮದ್ ಸುಲ್ತಾನ್ ಮತ್ತು ಸಿಟಿ ಫಯಾಜ್ ಅಹ್ಮದ್ ಗಾಯಗೊಂಡರು ಮತ್ತು ಹುತಾತ್ಮರಾದರು. ಪೊಲೀಸ್ ಪಡೆ ಪ್ರದೇಶವನ್ನು ಸುತ್ತುವರಿದಿದೆ. ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

Share