Connect with us


      




ದೇಶ

ಕೋವಿಡ್-19 ಪ್ರಕರಣಗಳ ವರದಿಗೆ 10 ರಾಜ್ಯಗಳಲ್ಲಿ ಕೇಂದ್ರ ತಂಡ ನಿಯೋಜಿಸಿದ ಕೇಂದ್ರ

Published

on

ನವದೆಹಲಿ, ಡಿಸೆಂಬರ್ 25(ಯು.ಎನ್.ಐ)ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ, ಕೇಂದ್ರವು ಹತ್ತು ರಾಜ್ಯಗಳಿಗೆ ಕೇಂದ್ರ ತಂಡಗಳನ್ನು ನಿಯೋಜಿಸಿದೆ. ಈ ತಂಡಗಳು ರಾಜ್ಯಗಳ ಕೋವಿಡ್ ಪಾಸಿಟಿವಿ ಹೆಚ್ಚಳ ವರದಿ ಮಾಡುವುದು ಅಥವಾ ವ್ಯಾಕ್ಸಿನೇಷನ್ ವೇಗವನ್ನು ವರದಿ ಮಾಡಲಿದೆ.

ಸರ್ಕಾರದ ಸೂಚನೆಯಂತೆ, ಈ ತಂಡಗಳನ್ನು ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಜಾಖರ್ಂಡ್ ಮತ್ತು ಪಂಜಾಬ್‍ನಲ್ಲಿ ನಿಯೋಜಿಸಲಾಗುವುದು ಮತ್ತು ಮೂರರಿಂದ ಐದು ದಿನಗಳವರೆಗೆ ರಾಜ್ಯ ಆರೋಗ್ಯ ಅಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸಲಿದೆ.

ತಂಡಗಳು ಜೀನೋಮ್ ಸೀಕ್ವೆನ್ಸಿಂಗ್‍ಗಾಗಿ ಭಾರತೀಯ ಸಾರ್ಸ್ ಕೋವ್-2 ಜೀನೋಮಿಕ್ಸ್ ಕನ್ಸೋರ್ಟಿಯಂ ನೆಟ್ ವರ್ಕ್ ಗೆ ಕ್ಲಸ್ಟರ್‍ಗಳಿಂದ ಸಾಕಷ್ಟು ಮಾದರಿಗಳನ್ನು ಕಳುಹಿಸುವುದು ಸೇರಿದಂತೆ ಕೋವಿಡ್ -19 ಪರೀಕ್ಷೆಯೊಂದಿಗೆ ಕಂಟೈನ್‍ಮೆಂಟ್ ಕಾರ್ಯಾಚರಣೆಗಳು, ಸಂಪರ್ಕ ಪತ್ತೆಹಚ್ಚುವ ಕೆಲಸ ಮಾಡಲಿದೆ

ಕೋವಿಡ್ ಮಾರ್ಗಸೂಚಿಗಳ ಪಾಲನೆ, ಆಸ್ಪತ್ರೆಯ ಹಾಸಿಗೆಗಳ ಲಭ್ಯತೆ, ಆಂಬ್ಯುಲೆನ್ಸ್‍ಗಳು, ವೆಂಟಿಲೇಟರ್‍ಗಳು, ವೈದ್ಯಕೀಯ ಆಮ್ಲಜನಕ ಇತ್ಯಾದಿಗಳ ಬಗ್ಗೆ ಮಾಹಿತಿ ನೀಡಲಿದೆ.

ರಾಜ್ಯ ಮಟ್ಟದ ಕೇಂದ್ರ ತಂಡಗಳು ಪರಿಸ್ಥಿತಿಯನ್ನು ನಿರ್ಣಯಿಸಿ, ಪರಿಹಾರ ಕ್ರಮಗಳನ್ನು ಸೂಚಿಸುತ್ತವೆ ಮತ್ತು ಪ್ರತಿ ಸಂಜೆ 7 ಗಂಟೆಯೊಳಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಮತ್ತು ರಾಜ್ಯ ಸರ್ಕಾರಕ್ಕೆ ನಾಗರೀಕರ ಆರೋಗ್ಯ ಚಟುವಟಿಕೆಗಳ ಕುರಿತು ವರದಿಯನ್ನು ಸಲ್ಲಿಸುತ್ತವೆ.

24 ಗಂಟೆಗಳಲ್ಲಿ 7,189 ಪ್ರಕರಣಗಳೊಂದಿಗೆ ಭಾರತದ ಕೋವಿಡ್ -19 ಪ್ರಕರಣಗಳು 3.47 ಕೋಟಿಗೆ ಏರಿದೆ. ಭಾರತದಲ್ಲಿ 387 ಸಾವುಗಳು ಸಂಭವಿಸಿವೆ ಮತ್ತು 7,286 ಚೇತರಿಕೆ ಕಂಡಿವೆ. ಏತನ್ಮಧ್ಯೆ, ದೈನಂದಿನ ಸಕ್ರಿಯ ಪ್ರಕರಣಗಳು 484ಕ್ಕೆ ಇಳಿದಿವೆ.

ವೈರಸ್‍ನಿಂದ ಸಾವನ್ನಪ್ಪಿದವರ ಸಂಖ್ಯೆ ಒಟ್ಟು 4,79,520ಕ್ಕೆ ಏರಿದೆ, ಇದು ಒಟ್ಟು ಕ್ಯಾಸೆಲೋಡ್‍ನ ಶೇಕಡಾ 1.38 ರಷ್ಟಿದೆ. ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 3,42,23,263ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 77,032ಕ್ಕೆ ಏರಿದೆ.

ದೇಶ

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

Published

on

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ದೆಹಲಿಯ ಬೀದಿಗಳಲ್ಲಿ ಮೆರವಣಿಗೆ ಮಾಡಿದ ಘಟನೆ ಶಹದಾರ ಜಿಲ್ಲೆಯ ವಿವೇಕ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

ಯುವತಿಯ ಜೊತೆ ಅಮಾನವೀಯವಾಗಿ ನಡೆದುಕೊಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ ದೆಹಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಡಿಸಿಡಬ್ಲ್ಯೂ  ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪ್ರಕಾರ, ಕೆಲವು ಅಕ್ರಮ ಮದ್ಯ ಮಾರಾಟಗಾರರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ನಂತರ ಜನರ ಹರ್ಷೋದ್ಗಾರದ ನಡುವೆ ಆಕೆಯ ತಲೆಯನ್ನು ಬೋಳಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು ಮೆರವಣಿಗೆ ಮಾಡಲಾಯಿತು. ಪೊಲೀಸರ ಪ್ರಕಾರ, ಘಟನೆಯು ಆರೋಪಿಯೊಂದಿಗೆ ಮಹಿಳೆಯ ಮೇಲಿನ ವೈಯಕ್ತಿಕ ದ್ವೇಷದ ಕಾರಣ ಈ ರೀತಿಯಾಗಿ ನಡೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಹೇಳಿದರು.

ವರದಿಗಳ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಆತನ ಸಾವಿಗೆ ಮಹಿಳೆಯೇ ಕಾರಣ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಿಳೆಗೆ ಮದುವೆಯಾಗಿ ಒಂದು ಮಗುವಿದೆ.

Continue Reading

ದೇಶ

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

Published

on

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು ತೆಗೆದು ಹಾಕಲಾಗಿದೆ. ಇದಲ್ಲದೇ ಈಗ ಶೇ.50ರಷ್ಟು ಸಾಮರ್ಥ್ಯದೊಂದಿಗೆ ಸಿನಿಮಾ ಥಿಯೇಟರ್ ಗಳನ್ನು ತೆರೆಯಲು ಅನುಮತಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 7,498 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 29 ಮಂದಿ ಸಾವಿಗೀಡಾಗಿದ್ದಾರೆ. ಇನ್ನು ದೆಹಲಿಯಲ್ಲಿ ಬುಧವಾರ 5,760 ಕೊರೊನಾ ಪ್ರಕರಣಗಳು ದಾಖಲಾಗಿ 30 ಜನರು ಸಾವಿಗೀಡಾಗಿದ್ದರು.

ಡಿಡಿಎಂಎ ಸಭೆಯಲ್ಲಿ ಮಹತ್ವದ ನಿರ್ಧಾರ

ಸೋಂಕಿತ ಪ್ರಕರಣಗಳು ಕಡಿಮೆಯಾಗುತ್ತಿರುವುದರಿಂದ ದೆಹಲಿಯಲ್ಲಿ ಕೋವಿಡ್ ಗೈಡ್ ಲೈನ್ಸ್ ಗಳನ್ನು ಸಡಿಲಗೊಳಿಸಬೇಕೆಂಬ ಬಲವಾದ ಬೇಡಿಕೆ ಕೇಳಿಬಂದಿತ್ತು. ಈ ಒತ್ತಡಕ್ಕೆ ಮಣಿದಿರುವ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಇಂದು ಮಹತ್ವದ ಸಭೆ ನಡೆಸಿತು. ಈ ಮಹತ್ವದ ಸಭೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆಗೆದುಹಾಕುವುದು ಸೇರಿದಂತೆ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು. ಆದರೆ, ರಾತ್ರಿ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮುಂದುವರಿಯುಲಿದೆ.

ದೆಹಲಿಯಲ್ಲಿ ಯಾವ್ಯಾವ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ?

– ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5 ರವರೆಗಿನ ವಾರಾಂತ್ಯದ ಕರ್ಫ್ಯೂನ್ನು ರದ್ದುಪಡಿಸಲಾಗಿದೆ.
– ಮದುವೆ ಸಮಾರಂಭದಲ್ಲಿ 200 ಜನರ ಮಿತಿ. ಈವರೆಗೆ ಇದ್ದ 15 ಮಂದಿ ಪಾಲ್ಗೊಳ್ಳಲು ಹಾಕಿದ್ದ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.
– ದೆಹಲಿಯಲ್ಲಿ ಸಿನಿಮಾ ಹಾಲ್‌ ತೆರೆಯಲು ಅವಕಾಶ. ಆದರೆ, ಶೇ.50ರಷ್ಟು ಸಾಮರ್ಥ್ಯ ಹೊಂದಿರುವುದು ಕಡ್ಡಾಯ.
– ಬಾರ್ ಮತ್ತು ರೆಸ್ಟೋರೆಂಟ್‌ಗಳು ಶೇಕಡಾ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ನಿರ್ದೇಶನ.

ದೆಹಲಿಯಲ್ಲಿ ಯಾವ್ಯಾವ ನಿರ್ಬಂಧಗಳು ಮುಂದುವರಿಯಲಿವೆ?

– ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ಶಾಲೆ ತೆರೆಯುವ ಬಗ್ಗೆ ಮುಂದಿನ ಸಭೆಯಲ್ಲಿ ಚರ್ಚೆ
– ರಾತ್ರಿ ಕರ್ಫ್ಯೂ ದೆಹಲಿಯಲ್ಲಿ ಮುಂದುವರಿಯಲಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ನೇತೃತ್ವದಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಉಪಸ್ಥಿತರಿದ್ದರು. ಡಿಡಿಎಂಎ ಇಂದು ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಆದೇಶ ಹೊರಡಿಸುವ ನಿರೀಕ್ಷೆಯಿದೆ. ಅಲ್ಲಿಯವರೆಗೆ ಈಗಿರುವ ನಿರ್ಬಂಧಗಳು ಮುಂದುವರಿಯಲಿವೆ.

Continue Reading

ದೇಶ

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

Published

on

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ ಬ್ಲಾಕ್‌ನ ಕೆ ವಾಗೈಕುಲಂ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳದಾದ ಮಹಿಳೆಯೇ ಮೀನಾಕ್ಷಿ (೪೫). ಈಕೆಯ ಮಗ ಅದೇ ಗ್ರಾಮದ ಅನ್ಯ ಜಾತಿಯ ಹುಡುಗಿಯನ್ನು ವಿವಾಹವಾದ ಕಾರಣಕ್ಕೆ ತಾಯಿಯ ಮೇಲೆ ಹುಡುಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಮಹಿಳೆಯು ಅರುಪ್ಪುಕೊಟ್ಟೈ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮೀನಾಕ್ಷಿಯು ಪರಾಳಚಿ ಠಾಣೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಿದ್ದು, ಬಾಲಕಿಯ ತಾಯಿ ಸೇರಿದಂತೆ 14 ಮಂದಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ಜನವರಿ 22 ರಂದು ಮೀನಾಕ್ಷಿ ಅವರ ಮಗ ಅದೇ ಗ್ರಾಮದ ಬೇರೆ ಜಾತಿಯ ಹುಡುಗಿಯೊಂದಿಗೆ ಓಡಿಹೋಗಿ ವಿವಾಹವಾದರು. ನಂತರ ಆಶ್ರಯ ಕೋರಿ ಅರುಪ್ಪುಕೊಟ್ಟೈ ಎಲ್ಲಾ ಮಹಿಳಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರು. ಮೂರು ದಿನಗಳ ನಂತರ, ಜನವರಿ 25 ರಂದು, ಹುಡುಗಿಯ ಸಂಬಂಧಿಕರು ಮತ್ತು ಇತರರು ಮೀನಾಕ್ಷಿ ಅವರ ಮನೆಗೆ ನುಗ್ಗಿ ಅವಳನ್ನು ಹೊರಗೆಳೆದು, ದೀಪದ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು ಎಂದು ಹೇಳಿದರು.

Continue Reading
Advertisement
ಕರ್ನಾಟಕ13 mins ago

ಉ.ಪ್ರ.‌ಚುನಾವಣೆ ನಂತರ ರಾಜ್ಯದಲ್ಲಿ‌ಮಹತ್ವದ ಬದಲಾವಣೆ: ಸಿ.ಎಂ ಇಬ್ರಾಹಿಮ್

ಬೆಂಗಳೂರು: ಜನೆವರಿ 27 (ಯು.ಎನ್.ಐ.)‌ ನಾನು ಹೇಳಿದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಘಟಿಸುತ್ತಾ ಬಂದಿವೆ.‌ ಉತ್ತರ ಪ್ರದೇಶ ಚುನಾವಣಾ ಬಳಿಕ ಸಾರ್ವತ್ರಿಕ ಚುನಾವಣೆ, ಇಲ್ಲವೇ ರಾಷ್ಟ್ರ ಪತಿ...

ದೇಶ27 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ2 hours ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ2 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ3 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ4 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ4 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಸಿನೆಮಾ4 hours ago

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು...

ಟ್ರೆಂಡಿಂಗ್

Share