Connect with us


      
ಕರ್ನಾಟಕ

ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಬಿಜೆಪಿ ಕಾರ್ಯಕರ್ತರಿಗೆ ಸಿಎಂ ಕರೆ

Vanitha Jain

Published

on

ಬೆಂಗಳೂರು,ಜನವರಿ 05(ಯು.ಎನ್.ಐ) ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆನ್ನಲಾಗಿದೆ.

ಬೆಂಗಳೂರಿನ ಬಿಜೆಪಿ ರಾಜ್ಯ ಪ್ರಧಾನ ಕಚೇರಿ “ಜಗನ್ನಾಥ ಭವನ”ದಲ್ಲಿ ಸಿಎಂ ಬೊಮ್ಮಾಯಿ, ಬೆಂಗಳೂರಿನ ನಗರದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಮುಖಂಡರ ಜೊತೆ ಸಭೆ ನಡೆಸಿದರು.

ಈಗಾಗಲೇ ಬಿಬಿಎಂಪಿ ವಾರ್ಡ್ ಗಳ ಸಂಖ್ಯೆಯನ್ನು ಸರ್ಕಾರ ಹೆಚ್ಚಿಸಿದೆ. ಅಲ್ಲದೇ ವಾರ್ಡ್ ಗಳ ಪ್ರಗತಿ ಬಗ್ಗೆ ಅವಲೋಕಿಸುವಂತೆ ಸೂಚನೆ ನೀಡಲು ಕೆಲವು ದಿನಗಳ ಹಿಂದೆ ಬೊಮ್ಮಾಯಿ ಬೆಂಗಳೂರನ್ನು ಪ್ರತಿನಿಧಿಸುವ ಬಿಜೆಪಿ ಶಾಸಕರು, ಸಚಿವರು, ಸಂಸದರ ಜೊತೆ ಸಭೆ ನಡೆಸಿದ್ದರು. ಇದೀಗ ಮುಂದುವರೆದು ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡುವ ಸಲುವಾಗಿ ಸಭೆ ನಡೆಸಿದ್ದಾರೆ.

2022ರ ಮಾರ್ಚ್ ತಿಂಗಳಿನಲ್ಲಿ 243 ವಾರ್್ಜಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯೂ ಇದೆ. ಹೀಗಾಗಿ ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ತಾಲೀಮು ನಡೆಸಿವೆ. ಇತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕರ್ನಾಟಕ ಸರ್ಕಾರ ಸಹ ಸಿದ್ಧತೆ ಆರಂಭಿಸಿದೆ. ಹೀಗಾಗಿ ಕೋವಿಡ್ ಹಾಗೂ ರಸ್ತೆ ಗುಂಡಿ ಸಮಸ್ಯೆಯನ್ನು ಬೆಂಗಳೂರಿನಲ್ಲಿ ಪ್ರಮುಖವಾಗಿ ಪರಿಗಣಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಇವುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ಬಿಜೆಪಿ ಮುಖಂಡರು ಮತ್ತು ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

ನಗರ ಮತ್ತು ರಾಜ್ಯದಲ್ಲಿ ಮುಂದಿನ ಕೆಲವು ವಾರಗಳಲ್ಲಿ ಕೋವಿಡ್ ಪ್ರಮಾಣ ತೀವ್ರವಾಗಿ ಹೆಚ್ಚುವ ಸಾಧ್ಯತೆ ಇದೆ. ಇದರ ನಿಗ್ರಹಕ್ಕೆ ಜನಜಾಗೃತಿ, ವಾರ್ಡ್ ಮಟ್ಟದಲ್ಲಿ ವಾರ್ ರೂಂ, ಕಾಲ್ ಸೆಂಟರ್ ಮಾಡಿ ಜನರ ಸೇವೆಯಲ್ಲಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಸೇವೆಯನ್ನು ಸಲ್ಲಿಸಬೇಕೆಂದಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧದ ರಾಜಕಾರಣಕ್ಕೆ ಸರ್ಕಾರದ ವಿರುದ್ಧದ ಮೇಕೆದಾಟು ಪಾದಯಾತ್ರೆಗೆ ಲಾಕ್ಡೌನ್, ವಾರಾಂತ್ಯದ ಕಫ್ರ್ಯೂ ಜಾರಿ ಮಾಡಿದರೂ ಕಾಂಗ್ರೆಸ್ ಪಾದಯಾತ್ರೆಗೆ ಮುಂದಾಗಿದೆ.ಒಂದುವೇಳೆ ಪಾದಯಾತ್ರೆ ಯಶಸ್ವಿಯಾದರೆ ಬಿಜೆಪಿಯ ರಾಜಕಾರಣಕ್ಕೆ ತೊಂದರೆಯಾಗುತ್ತದೆಂಬ ಸುಳಿವೊಂದು ಸಿಕ್ಕಿದೆ.ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿಗೆ ಪಕ್ಷದ ಬೆಂಬಲ ಬೇಕಿದೆ.ಈ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಅನಪೇಕ್ಷಿತವಾದುದು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಸರ್ವಪ್ರಯತ್ನವೂ ನಡೆದಿದೆ. ಕಾಂಗ್ರೆಸ್ಸಿಗರು ತಪ್ಪು ಮಾಹಿತಿ ನೀಡುತ್ತಿದ್ದು, ಈ ಮೂಲಕ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದರ ಕುರಿತು ಜನರಿಗೆ ಮಾಹಿತಿ ನೀಡಬೇಕು ಸಲಹೆ ನೀಡಿದ್ದಾರೆ.

ಈ ಸಭೆಯ ವೇದಿಕೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ, ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದಗೌಡ ಉಪಸ್ಥಿತರಿದ್ದರು.

Share