Published
5 months agoon
By
Vanitha Jainನವದೆಹಲಿ, ಡಿಸೆಂಬರ್ 10(ಯು.ಎನ್.ಐ): ತಮಿಳುನಾಡಿನ ಕುನೂರಿನಲ್ಲಿ ಹೆಲಿಕಾಪ್ಟರ್ ಪತನದಿಂದ ಸಾವನ್ನಪ್ಪಿದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ದೆಹಲಿ ಕಂಟೋನ್ಮೆಂಟ್ನ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ನಡೆಯಲಿದೆ.
ಜನರಲ್ ರಾವತ್ ಅವರ ಅಂತಿಮ ವಿಧಿಗಳನ್ನು ಸಂಪೂರ್ಣ ಸೇನಾ ಗೌರವಗಳೊಂದಿಗೆ ನೆರವೇರಿಸಲಾಗುವುದು.
ನಿಧನರಾದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಎನ್ಎಸ್ಎ ಅಜಿತ್ ದೋವಲ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಇತರರು ಅಂತಿಮ ನಮನ ಸಲ್ಲಿಸಿದರು.
ಮೂವರು ಸೇನಾ ಮುಖ್ಯಸ್ಥರು – ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಅಂತಿಮ ನಮನ ಸಲ್ಲಿಸಿದರು.
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಸ್ಥಳವನ್ನು ಬಂದ್ ಮಾಡಿ: ಕೋರ್ಟ್ ಆದೇಶ
ಜ್ಞಾನವಾಪಿ ಮಸೀದಿಯ ಕೊಠಡಿಯಲ್ಲಿ ಶಿವಲಿಂಗ ಪತ್ತೆ: ವಿಎಚ್ಪಿ ಸಂತಸ
ಜೆಡಿಯು ಶಾಸಕ ನೃತ್ಯ ; ಪಕ್ಷದ ಎಚ್ಚರಿಕೆ
1402 ವರ್ಷಗಳ ನಂತರ ವೈಶಾಖ ಪೂರ್ಣಿಮೆಯಂದು ಪೂರ್ಣ ಚಂದ್ರಗ್ರಹಣ
ಕೇರಳದಲ್ಲಿ ಟ್ವೆಂಟಿ-20 ಜೊತೆ ಎಎಪಿ ರಾಜಕೀಯ ಮೈತ್ರಿ!
ಕೇರಳ ಮಳೆ ಎಚ್ಚರ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ