Connect with us


      
ಕರ್ನಾಟಕ

ಬಿಜೆಪಿ ಭರ್ಜರಿ ಗೆಲುವು: ಉಸ್ತುವಾರಿಗಳಿಗೆ ಅಭಿನಂದನಾ ಸಮಾರಂಭ

Iranna Anchatageri

Published

on

ಬೆಂಗಳೂರು: ಮಾರ್ಚ್ 12 (ಯು.ಎನ್.ಐ.) ಪಂಜಾಬ್ ಹೊರತುಪಡಿಸಿ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ್, ಮಣಿಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಈ ಚುನಾವಣೆಗಳಲ್ಲಿ ಉಸ್ತುವಾರಿಗಳಾಗಿ ಕಾರ್ಯನಿರ್ವಹಿಸಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಸೇರಿದಂತೆ ಚುನಾವಣೆಯಲ್ಲಿ ಕೆಲಸ ಮಾಡಿದ ಶಾಸಕರು ಮತ್ತು ಕಾರ್ಯಕರ್ತರಿಗೆ ಅಭಿನಂದಿಸಲಾಗುತ್ತಿದೆ.

ಅಂಡಮಾನ್ ಮತ್ತು ‌ನಿಕೋಬಾರ್ ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕೆಲಸ ಮಾಡಿದ ರಾಜ್ಯ ಬಿಜೆಪಿ ತಂಡಕ್ಕೂ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ.

Share