Connect with us


      
ಕರ್ನಾಟಕ

ನಾಳೆ ಪ್ರಧಾನಿ ಭೇಟಿ: ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ

Iranna Anchatageri

Published

on

ಬೆಂಗಳೂರು: ಜೂನ್ 19 (ಯು.ಎನ್.ಐ.) ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ನಗರಕ್ಕೆ ಆಗಮಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ, ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶನಿವಾರ ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ. ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Share